ಸೂರತ್ ಚುನಾವಣಾ ಪ್ರಚಾರಕ್ಕೆ ಸಚಿವ ಖಾದರ್
Update: 2017-12-04 22:40 IST
ಮಂಗಳೂರು, ಡಿ. 4: ಎಐಸಿಸಿ ನಿರ್ದೇಶನದ ಮೇರೆಗೆ ರಾಜ್ಯದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಅವರು ಮೂರು ದಿನಗಳ ಕಾಲ ಗುಜರಾತ್ ಪ್ರವಾಸ ಕೈಗೊಳ್ಳಲಿದ್ದಾರೆ.
ಗುಜರಾತ್‌ನ ಸೂರತ್ ಜಿಲ್ಲೆಯಲ್ಲಿ ನಡೆಯುವ ಕಾಂಗ್ರೆಸ್ ಚುನಾವಣಾ ಪ್ರಚಾರದಲ್ಲಿ ಸಚಿವ ಖಾದರ್ ಭಾಗವಹಿಸಲಿದ್ದಾರೆ. ಎಐಸಿಸಿ ನಿರ್ದೇಶನದಂತೆ ಸಚಿವರು ಡಿ.5ರಿಂದ ಮೂರು ದಿನಗಳ ಕಾಲ ಪ್ರವಾಸ ಕೈಗೊಂಡಿದ್ದಾರೆ.