ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ
Update: 2017-12-04 22:51 IST
ಉಡುಪಿ, ಡಿ.4: ಅನಾರೋಗ್ಯದಿಂದ ಬಳಲುತ್ತಿದ್ದ 76ಬಡಗಬೆಟ್ಟು ಗ್ರಾಮದ ಶಾಂತಿನಗರ ನಿವಾಸಿ ಪ್ರೇಮಾ ಸರಳಾಯ(76) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಡಿ.4ರಂದು ಬೆಳಗ್ಗೆ ಬಾವಿಗೆ ಹಾರಿ ಆತ್ಮಹತ್ಯೆಯನ್ನು ಮಾಡಿಕೊಂಡಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಕಳ: ವಿಪರೀತ ಮದ್ಯ ಸೇವಿಸುವ ಚಟ ಹೊಂದಿದ್ದ ನಂದಳಿಕೆ ಗ್ರಾಮದ ನಡುಬೆಟ್ಟು ನಿವಾಸಿ ರೋಬರ್ಟ್ ಡಿಸೋಜ(70) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಡಿ.3ರಂದು ರಾತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.