×
Ad

ಯಕ್ಷಗಾನ ಅಕಾಡೆಮಿ ಪೆಲೋಶಿಪ್‌ಗೆ ಅರ್ಜಿ ಆಹ್ವಾನ

Update: 2017-12-04 22:56 IST

ಉಡುಪಿ, ಡಿ.4: ಕರ್ನಾಟಕ ಯಕ್ಷಗಾನ ಅಕಾಡೆಮಿಯು 2017-18ನೇ ಸಾಲಿನಲ್ಲಿ ಗಿರಿಜನ ಉಪಯೋಜನೆಯಡಿ ಅಕಾಡೆಮಿಯ ವ್ಯಾಪ್ತಿಗೆ ಒಳಪಡುವ ಯಕ್ಷಗಾನ ಕ್ಷೇತ್ರದಲ್ಲಿ 5 ತಿಂಗಳ ಕಾಲ ಸಂಶೋಧನಾ ಅಧ್ಯಯನ ಮಾಡಿ ಪ್ರಬಂಧ ಮಂಡಿಸುವವರಿಗೆ ಫೆಲೋಶಿಪ್ ನೀಡಲು ಪರಿಶಿಷ್ಟ ಪಂಗಡದ ಆಸಕ್ತರಿಂದ ಅರ್ಜಿಯನ್ನು ಆಹ್ವಾನಿಸಿದೆ.

ಈ ಸಂಶೋಧನಾ ಕಾರ್ಯಕ್ಕಾಗಿ ಒಬ್ಬ ಸಂಶೋಧನಾ ಅ್ಯರ್ಥಿಗೆ 90,000 ಹಾಗೂ ಮಾರ್ಗದರ್ಶನ ಗೌರವ ಸಂಭಾವನೆ ರೂ.10,000 ನೀಡಲಾಗುತ್ತದೆ. ಆಸಕ್ತಿಯುಳ್ಳವರು ಕನ್ನಡ ಬಾಷಾ ವಿಜ್ಞಾನ, ಜಾನಪದ, ಸಮಾಜವಿಜ್ಞಾನ, ರಾಜ್ಯಶಾಸ್ತ್ರ, ಅರ್ಥಶಾಸ್ತ್ರ, ಮಹಿಳಾ ಅಧ್ಯಯನ, ಇತಿಹಾಸ, ಮಾನವಶಾಸ್ತ್ರ, ಪತ್ರಿಕೋಧ್ಯಮ, ಗ್ರಂಥಾಲಯ ಮತ್ತು ಮಾಹಿತಿ ತಂತ್ರಜ್ಞಾನ ಅಲ್ಲದೇ ಇಂಗ್ಲೀಷ್, ಹಿಂದಿ ಇತ್ಯಾದಿ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಾಡಿರುವವರು ಅರ್ಜಿ ಸಲ್ಲಿಸಬಹುದು.
ಆಸಕ್ತರು ತಮ್ಮ ಅಧ್ಯಯನದ ಬಗ್ಗೆ ನಾಲ್ಕು ಪುಟಗಳ ಸಾರಲೇಖ ಹಾಗೂ ತಮ್ಮ ಕಿರುಪರಿಚಯ ಮತ್ತು ಜಾತಿ ಪ್ರಮಾಣಪತ್ರದೊಂದಿಗೆ ಅರ್ಜಿಯನ್ನು ರಿಜಿಸ್ಟ್ರಾರ್,ಕರ್ನಾಟಕ ಯಕ್ಷಗಾನ ಅಕಾಡೆಮಿ, 2ನೇ ಮಹಡಿ, ಚಾಲುಕ್ಯ ವಿಭಾಗ, ಕನ್ನಡ ಭವನ, ಜೆ.ಸಿ.ರಸ್ತೆ ಬೆಂಗಳೂರು-2 ಇವರಿಗೆ ಡಿ.20ರೊಳಗೆ ಅಂಚೆ ಮೂಲಕ ಅಥವಾ ಇ-ಮೇಲ್ kybabangalore@gmail.com ಗೆ ಕಳುಹಿಸಿಕೊಡಬಹುದು.

ಫೆಲೋಶಿಪ್ ಅರ್ಜಿ ನಮೂನೆಯನ್ನು ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆಯಬಹುದು ಎಂದು ಬೆಂಗಳೂರಿನ ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News