×
Ad

ಸಂಗೀತ ನೃತ್ಯ ಅಕಾಡಮಿಯ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

Update: 2017-12-04 23:00 IST

ಉಡುಪಿ, ಡಿ.4: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು 2017-18ನೇ ಸಾಲಿನ ಶಿಷ್ಯವೇತನಕ್ಕಾಗಿ ಅರ್ಹ ಅ್ಯರ್ಥಿಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಶಾಸ್ತ್ರೀಯ ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾಕೀರ್ತನ ಮತ್ತು ಗಮಕ ಈ ಆರು ಕಲಾಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರುವ 16ರಿಂದ 24 ವರ್ಷ ವಯೋಮಾನದೊಳಗಿರುವ ಅ್ಯರ್ಥಿ ಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಸಂದರ್ಶನದಲ್ಲಿ ಆಯ್ಕೆಯಾದ ಅ್ಯರ್ಥಿಗಳಿಗೆ 10,000ರೂ.ವನ್ನು ಶಿಷ್ಯವೇತನವಾಗಿ ನೀಡಲಾಗುವುದು. ಅರ್ಜಿಗಳನ್ನು ಅಕಾಡೆಮಿಯ ಕಚೇರಿ ಯಿಂದ ಉಚಿತವಾಗಿ ಪಡೆಯಬಹುದು. ಬೇರೆ ಜಿಲ್ಲೆಗಳ ಅ್ಯರ್ಥಿಗಳು ಆಯಾ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಉಚಿತವಾಗಿ ಅರ್ಜಿಗಳನ್ನು ಪಡೆಯಬಹುದು.

ಅರ್ಜಿಯ ಜೊತೆ ಇತ್ತೀಚಿನ ಪಠ್ಯಕ್ರಮವನ್ನು ಸಹ ನೀಡಲಾಗಿದೆ. ಅಂಚೆ ಮೂಲಕ ಅರ್ಜಿ ಮತ್ತು ಪಠ್ಯಕ್ರಮ ಪಡೆಯಲಿಚ್ಚಿಸುವವರು 10 ರೂ.ನ ಸ್ಟಾಂಪ್ ಹಚ್ಚಿದ ಸ್ವವಿಳಾಸವಿಳ್ಳ ಲಕೋಟೆಯನ್ನು ರಿಜಿಸ್ಟ್ರಾರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು- 560002 ಇಲ್ಲಿಗೆ ಕಳುಹಿಸಿಕೊಡಬಹುದು.

ಭರ್ತಿ ಮಾಡಿದ ಅರ್ಜಿಯನ್ನು ಮೇಲಿನ ವಿಳಾಸಕ್ಕೆ ಕಳುಹಿಸಿಕೊಡಲು ಡಿ.15 ಕೊನೆಯ ದಿನವಾಗಿದೆ ಎಂದು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News