ವಿಶ್ವಕನ್ನಡ ಕಣ್ಮಣಿ ಪ್ರಶಸ್ತಿಗೆ ಅರ್ಜಿ ಆಹ್ವಾನ
Update: 2017-12-05 19:29 IST
ಬೆಂಗಳೂರು, ಡಿ. 5: ವಿಶ್ವ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಪರಿಷತ್ ವತಿಯಿಂದ 13ನೆ ವರ್ಷದ ಕನ್ನಡ ಜಾನಪದ ಸಾಂಸ್ಕೃತಿಕ ಮಹೋತ್ಸವದ ಪ್ರಯುಕ್ತ ‘ವಿಶ್ವಕನ್ನಡ ಕಣ್ಮಣಿ’ ಪ್ರಶಸ್ತಿಗಾಗಿ ವಿವಿಧ ಕ್ಷೇತ್ರದ ಸಾಧಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 35ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಹೀಗಾಗಿ ಎಲ್ಲ ಜಿಲ್ಲೆಗಳ, ಗಡಿನಾಡಿನಲ್ಲಿರುವ ಹಾಗೂ ವಿದೇಶಗಳಲ್ಲಿರುವ ಕನ್ನಡಿಗರು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು. ಆಸಕ್ತರು ಅಗಸನೂರು ತಿಮ್ಮಪ್ಪ, ರಾಜ್ಯಾಧ್ಯಕ್ಷ, ಕನ್ನಡ ಸಾಹಿತ್ಯ ಸಾಂಸ್ಕೃತಿಕ ಪರಿಷತ್, ನಂ.20, 1ನೆ ಅಡ್ಡರಸ್ತೆ, ಶಿರಡಿಸಾಯಿನಗರ, ಕೆ.ನಾರಾಯಣಪುರ ಮುಖ್ಯರಸ್ತೆ, ಥಣಿಸಂದ್ರ ಬೆಂ.77ಕ್ಕೆ ಅರ್ಜಿಗಳನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ದೂ.9901683731ಕ್ಕೆ ಸಂಪರ್ಕಿಸಲು ಪ್ರಕಟನೆಯಲ್ಲಿ ತಿಳಿಸಲಾಗಿದೆ.