×
Ad

ಮೀನುಗಾರರ ಪ್ರಾಥಮಿಕ ಸಹಕಾರ ಸಂಘಕ್ಕೆ ಅತ್ಯುತ್ತಮ ಸಾಧನಾ ಪ್ರಶಸ್ತಿ

Update: 2017-12-05 20:11 IST

ಮಂಗಳೂರು, ಡಿ.5: ಕಳೆದ 37 ವರ್ಷಗಳಿಂದ ಮೀನುಗಾರಿಕಾ ಮತ್ತು ಡೀಸಿಲ್ ವಿತರಣೆಯ ಅತ್ಯುತ್ತಮ ಸಾಧನೆಗಾಗಿ ಮಂಗಳೂರು ಯಾಂತ್ರಿಕ ಮೀನುಗಾರರ ಪ್ರಾಥಮಿಕ ಸಹಕಾರ ಸಂಘಕ್ಕೆ ಅತ್ಯುತ್ತಮ ಸಾಧನಾ ಪ್ರಶಸ್ತಿ ಲಭಿಸಿದೆ. ಮಂಗಳೂರಿನಲ್ಲಿ ಇತ್ತೀಚೆಗೆ ಜರಗಿದ ರಾಜ್ಯಮಟ್ಟದ 64ನೆ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರಂಭದಲ್ಲಿ ಸಚಿವ ಪ್ರಮೋದ್ ಮಧ್ವರಾಜ್ ಪ್ರಶಸ್ತಿ ಪ್ರದಾನ ಮಾಡಿದರು.

ಕಾರ್ಯಕ್ರಮದಲ್ಲಿ ಸಂಘದ ಉಪಾದ್ಯಕ್ಷ ಉಮೇಶ್ ಟಿ. ಕರ್ಕೇರ, ಕಾರ್ಯದರ್ಶಿ ಟಿಶನ್ ಕುಮಾರ್ ಅವರನ್ನು ಸನ್ಮಾನಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿಯ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News