×
Ad

ರೆತರ ಆತ್ಮಹತ್ಯೆ ನಿಲ್ಲಲು ಜೆಡಿಎಸ್ ಅಧಿಕಾರಕ್ಕೆ ತನ್ನಿ: ಎಚ್.ಡಿ.ಕುಮಾರಸ್ವಾಮಿ

Update: 2017-12-05 22:29 IST

ಮದ್ದೂರು, ಡಿ.5: ರಾಜ್ಯದಲ್ಲಿ ನಿರಂತರವಾಗಿ ನಡೆಯುತ್ತಿರುವ ರೈತರ ಆತ್ಮಹತ್ಯೆಗಳು ನಿಲ್ಲಬೇಕಾದರೆ ಜೆಡಿಎಸ್ ಪಕ್ಷ ಅಧಿಕಾರಕ್ಕೆ ತರಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದರು.

ಮದುವೆಯಾದ ಪಟ್ಟಣದ ಜೆಡಿಎಸ್ ಯುವ ಮುಖಂಡ ಬ್ಯಾಡರಹಳ್ಳಿ ರಾಮಕೃಷ್ಣ ನಯನ ದಂಪತಿ ಮನೆಗೆ ಮಂಗಳವಾರ ಭೇಟಿ ನೀಡಿ ಆಶೀರ್ವದಿಸಿದ ನಂತರ ಮಾತನಾಡಿದ ಅವರು, ರೈತರ ಆತ್ಮಹತ್ಯೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಿಲ್ಲವೆಂದು ಆರೋಪಿಸಿದರು. 2018ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ 113 ಸ್ಥಾನಗಳಿಗಿಂತ ಹೆಚ್ಚು ಕ್ಷೇತ್ರದಲ್ಲಿ ಗೆಲುವು ಸಾಧಿಸಿ ಅಧಿಕಾರಕ್ಕೆ ಬರಲಿದೆ. ಇದರಲ್ಲಿ ಯಾವುದೇ ಅನುಮಾನವಿಲ್ಲ. ರೈತರ ಸಮಸ್ಯೆ ಬಗೆಹರಿಯಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಈ ಶಾಸಕ ಕೆ.ಟಿ.ಶ್ರೀಕಂಠೇಗೌಡ, ಮಾಜಿ ಶಾಸಕ ಕೆ.ಸುರೇಶ್‌ಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್, ಯುವ ಘಟಕದ ಅಧ್ಯಕ್ಷ ಸಿ.ಟಿ.ಶಂಕರ್, ಜಿಪಂ ಸದಸ್ಯ ಬೋರಯ್ಯ, ತಾಪಂ ಸದಸ್ಯ ಮರಿಯಪ್ಪ, ಕಾಡಪ್ಪ, ಮಾದನಾಯಕನಹಳ್ಳಿ ರಾಜಣ್ಣ, ಪ್ರಕಾಶ್, ಬಿಳಿಯಪ್ಪ, ಮಹೇಂದ್ರ, ನಿವೃತ್ತ ಶಿಕ್ಷಕಿ ಸಾಕಮ್ಮ, ಫಿರೋಝ್, ಸ್ವಾಮಿಗೌಡ, ಕಾಳಿರಯ್ಯ, ರವಿ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News