×
Ad

ವಾಹನ ಸಮೇತ ಮರಳು ವಶ: ಪ್ರಕರಣ ದಾಖಲು

Update: 2017-12-05 23:04 IST

ಶಿವಮೊಗ್ಗ, ಡಿ. 5: ಕಾನೂನುಬಾಹಿರವಾಗಿ ಶರಾವತಿ ಹಿನ್ನೀರಿನಿಂದ ಮರಳು ಸಂಗ್ರಹಿಸಿ ದಾಸ್ತಾನು ಮಾಡುತ್ತಿದ್ದ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ, ವಾಹನ ಸಮೇತ ಮರಳನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ಜಿಲ್ಲೆಯ ಸಾಗರ ತಾಲೂಕಿನ ಆವಿನಹಳ್ಳಿಯ ಏಳುಗದ್ದೆ ಗ್ರಾಮದ ಬಳಿ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ಈ ದಾಳಿ ನಡೆಸಿದ್ದಾರೆ. ಒಂದು ಲಾರಿ, ಸುಮಾರು ಆರು ಲೋಡ್‌ನಷ್ಟು ಮರಳು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ಮೂವರು ಆರೋಪಿಗಳ ವಿರುದ್ಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News