×
Ad

ಮಣಿಪಾಲ: ಸ್ವಚ್ಛ ಭಾರತ್ ರಸಪ್ರಶ್ನೆ ಕಾರ್ಯಕ್ರಮ

Update: 2017-12-05 23:10 IST

ಮಣಿಪಾಲ, ಡಿ.5: ಜಿಲ್ಲಾಡಳಿತ ಹಾಗೂ ಉಡುಪಿ ಜಿಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಜಂಟಿ ಸಹಯೋಗದಲ್ಲಿ ಸ್ವಚ್ಛ ಭಾರತ್ ರಸಪ್ರಶ್ನೆ ಕಾರ್ಯಕ್ರಮ ಮಂಗಳವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಿತು.

ಈ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಶಾಲೆಗಳ 650ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿದ್ದರು. ಉದ್ಘಾಟನಾ ಕಾರ್ಯಕ್ರಮದಲ್ಲಿ ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಅರುಣಪ್ರಭಾ, ಉಡುಪಿ ನಗರಸಭೆ ಪೌರಾಯುಕ್ತ ಡಿ.ಮಂಜುನಾಥಯ್ಯ,ಕಾಪು ಪುರಸಭೆ ಮುಖ್ಯಾಧಿಕಾರಿ ರಾಯಪ್ಪ, ಕುಂದಾಪುರ ಪುರಸಭೆ ಮುಖ್ಯಾಧಿಕಾರಿ ಗೋಪಾಲಕೃಷ್ಣ, ಕಾರ್ಕಳ ಪುರಸಭೆ ಮುಖ್ಯಾಧಿಕಾರಿ ಮೇಬಲ್ ಡಿಸೋಜಾ, ಸಾಲಿಗ್ರಾಮ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಶ್ರೀಪಾದ, ನಗರಸಭೆ ಪರಿಸರ ಇಂಜಿನಿಯರ್ ರಾಘವೇಂದ್ರ ಮತ್ತಿತರರು ಉಪಸ್ಥಿತರಿದ್ದರು.

ವಿಜೇತರಿಗೆ ಪ್ರಥಮ ಬಹುಮಾನ 10,000 ರೂ, ದ್ವಿತೀಯ 6,000 ರೂ ಹಾಗೂ ತೃತೀಯ 4,000ರೂ.ಗಳ ನಗದು ಬಹುಮಾನ ವಿತರಿಸಲಾಯಿತು. ವಾಲ್‌ನೆಟ್ ನಾಲೆಡ್ಜ್ ಸೊಲ್ಯೂಷನ್ಸ್‌ನ ರಾಘವ ಚಕ್ರವರ್ತಿ ಹಾಗೂ ಜೇಕಬ್ ರಸಪ್ರಶ್ನೆ ಕಾರ್ಯಕ್ರಮ ನಡೆಸಿಕೊಟ್ಟರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News