×
Ad

ತೆಂಕನಿಡಿಯೂರು: ಎನ್ನೆಸ್ಸೆಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Update: 2017-12-05 23:14 IST

ಉಡುಪಿ, ಡಿ.5: ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ರಾಷ್ಟ್ರೀಯ ಸೇವಾ ಯೋಜನೆಯ 2017-18ನೆಯ ಸಾಲಿನ ವಿಶೇಷ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ ಶೆಟ್ಟಿಬೆಟ್ಟು ಸರಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ನಡೆಯಿತು.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಬಾಲಕೃಷ್ಣ ಎಸ್. ಹೆಗ್ಡೆ ವಹಿಸಿದ್ದರು. ಸಮಾರೋಪ ಭಾಷಣ ಮಾಡಿದ ರಾಷ್ಟ್ರಪ್ರಶಸ್ತಿ ಪುರಸ್ಕೃತ, ನಿವೃತ್ತ ಅಧ್ಯಾಪಕ ಪರ್ಕಳದ ನೆಂಪು ನರಸಿಂಹ ಭಟ್ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆಯ ಗೀತೆ ಅದರ ಸಂಪೂರ್ಣ ಮಾಹಿತಿ ಮತ್ತು ಧ್ಯೇಯೋದ್ದೇಶಗಳನ್ನು ತಿಳಿಸುತ್ತದೆ ಎಂದರು.

ಶಾಲೆಯ ಎಸ್‌ಡಿಎಂಸಿ ಮಾಜಿ ಉಪಾಧ್ಯಕ್ಷ ಸಂಜೀವ ಪೂಜಾರಿ ಹೆರ್ಗ, ಪ್ರೌಢಶಾಲಾ ವಿಭಾಗ ಮುಖ್ಯೋಪಾಧ್ಯಾಯಿನಿ ಶ್ರೀದೇವಿ ಬಾ, ಶೆಟ್ಟಿಬೆಟ್ಟು ಪ್ರಾಥಮಿಕ ಶಾಲಾ ನಿವೃತ್ತ ಮುಖ್ಯೋಪಾಧ್ಯಾಯಿನಿ ಅಹಲ್ಯಾ, ಪ್ರಾಥಮಿಕ ಶಾಲಾ ವಿಭಾಗದ ಪ್ರಬಾರ ಮುಖ್ಯೋಪಾಧ್ಯಾಯಿನಿ ವನಿ ಕೆ. ಶೆಟ್ಟಿಬೆಟ್ಟು ಉಪಸ್ಥಿತರಿದ್ದರು.

 ಕಾಲೇಜಿನ ಎನ್ನೆಸ್ಸೆಸ್ ಯೋಜನಾಧಿಕಾರಿ ಪ್ರೊ.ಮಂಜುನಾಥ ಸ್ವಾಗತಿಸಿದರೆ, ರವಿರಾಜ ಎಸ್. ಶಿಬಿರದ ವರದಿಯನ್ನು ವಾಚಿಸಿ, ವಂದಿಸಿದರು. ಸ್ನಾತಕೋತ್ತರ ವಿದ್ಯಾರ್ಥಿನಿ ಶಮಿತಾ ಬಹುಮಾನ ವಿಜೇತರ ಹೆಸರುಗಳನ್ನು ಪ್ರಕಟಿಸಿದರು. ಕನ್ನಡ ಸಹ ಪ್ರಾಧ್ಯಾಪಕ ಪ್ರೊ.ರಾಧಾಕೃಷ್ಣ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News