×
Ad

ಭವಿಷ್ಯದ ಪ್ರಾಕೃತಿಕ ಸಮತೋಲನವನ್ನು ಉಳಿಸುವುದು ನಮ್ಮೆಲ್ಲರ ಹೊಣೆ : ಡಾ.ಎಂ.ಆರ್. ರವಿ

Update: 2017-12-06 19:31 IST

ಕೊಣಾಜೆ,ಡಿ.6: ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯನ್ನು ಗ್ರಾಮೀಣ ಪ್ರದೇಶದ ರೈತರು ಸದುಪಯೋಗ ಪಡಿಸಿಕೊಂಡು ಬಹುಪಯೋಗಿ ಕಿಂಡಿ ಅಣೆಕಟ್ಟನ್ನು ನಿರ್ಮಿಸುವುದರ ಮೂಲಕ ಕೃಷಿ ಚಟುವಟಿಕೆ ಹಾಗೂ ನೀರಿನ ಅಂತರ್ಜಲ ಮಟ್ಟವನ್ನು ಕಾಪಾಡಿ ಭವಿಷ್ಯದ ಪ್ರಾಕೃತಿಕ ಸಮತೋಲನವನ್ನು ಉಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಎಂ ರವಿ ಅವರು ಹೇಳಿದರು.

ಅವರು ಬಂಟ್ವಾಳ ತಾಲೂಕು ಇರಾ ಗ್ರಾಮದ ಬಪ್ಪರ ಕಂಬಳ ಎಂಬಲ್ಲಿ ಇರಾ ಗ್ರಾಮ ಪಂಚಾಯತ್ ಅನುಷ್ಠಾನದಲ್ಲಿ ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಲ್ಲಿ ನಿರ್ಮಿಸಿದ ಕಿಂಡಿ ಅಣೆಕಟ್ಟನ್ನು  ಮಂಗಳವಾರ ಪರಿಶೀಲನೆ ನಡೆಸಿ ಮಾತನಾಡಿದರು.

ಆಧುನಿಕತೆಯ ಹೆಸರಲ್ಲಿ ಮೂಲೆಗುಂಪಾಗುತ್ತಿರುವ ಕೃಷಿ ಚಟುವಟಿಕೆಗಳನ್ನು ಜೀವಂತಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳೊಂದಿಗೆ ಜನಪ್ರತಿನಿಧಿಗಳು ಇಚ್ಚಾ ಶಕ್ತಿಯ ಸಹಕಾರ ನೀಡಿದಾಗ ಸರಕಾರದ ದೂರದೃಷ್ಟಿ ಯೋಜನೆಗಳು ಕಾರ್ಯಗತಗೊಳ್ಳಲು ಸಹಕಾರಿ ಎಂದರು.
ಬಂಟ್ವಾಳ ತಾಲೂಕು ಪಂಚಾಯಿತಿ ಅಧ್ಯಕ್ಷರಾದ ಚಂದ್ರಹಾಸ ಆರ್ ಕರ್ಕೆರಾ,  ಕುರ್ನಾಡು ಜಿಲ್ಲಾ ಪಂಚಾಯಿತಿ ಸದಸ್ಯರಾದ ಮಮತಾ ಡಿ ಎಸ್ ಗಟ್ಟಿ , ಇರಾ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ,  ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಸಿಪ್ರಿಯಾನ್ ಮಿರಾಂಡ ,  ಗ್ರಾಮ ಪಂಚಾಯಿತಿ ಸದಸ್ಯರಾದ ಮೊಯಿದಿನ್ ಕುಂಞಿ,  ಜನಾರ್ಧನ ಕುಲಾಲ್ ಗಣ್ಯರಾದ ಡಾ.ಸುರೇಖಾ ಶೆಟ್ಟಿ, ಸಂತೋಷ್ ಶೆಟ್ಟಿ , ಹಳೆ ಮನೆ ಅದ್ರಾಮ್ ಇರಾ, ನಾಗೇಶ್ ಜೋಗಿ, ಮೊಹಮ್ಮದ್, ರಂಜನ್ ಶೆಟ್ಟಿ ಮಹಮ್ಮದ್ ಅಲಿ ಬೊಳ್ಯಾರು, ಅಭಿಯಂತರರಾದ ರವಿಚಂದ್ರ ಹಾಗೂ ಗುರುಕಿರಣ್, ಪ್ರಬಾರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಳಿನಿ ಎ.ಕೆ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News