ಅಂಬೇಡ್ಕರ್ ಭವನ ನಿರ್ಮಾಣಕ್ಕೆ ನಿವೇಶನ ನೀಡದ ಜಿಲ್ಲಾಡಳಿತ: ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ

Update: 2017-12-06 14:01 GMT

ದಾವಣಗೆರೆ, ಡಿ. 6: ಅಂಬೇಡ್ಕರ್ ಭವನ ನಿರ್ಮಾಣಕ್ಕೆ 3 ಕೋಟಿ ರೂ. ಮಂಜೂರಾಗಿ 6 ವರ್ಷ ಕಳೆದರೂ ನಿವೇಶನ ನೀಡಲು ಜಿಲ್ಲಾಡಳಿತ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಆರೋಪಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಅಂಬೇಡ್ಕರ್ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಅಂಬೇಡ್ಕರ್ ಭವನ ನಿರ್ಮಾಣಕ್ಕೆ ನಿವೇಶನ ದೊರಕಿಸಿಕೊಡುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗೆ ಹಲವಾರು ಬಾರಿ ಮನವಿ ಮಾಡಿದರೂ ಈ ಬಗ್ಗೆ ಕಾಳಜಿ ವಹಿಸುತ್ತಿಲ್ಲ. ಆದ್ದರಿಂದ ಜಿಲ್ಲಾಡಳಿತಕ್ಕೆ ಅಂಬೇಡ್ಕರ್ ಪರಿನಿರ್ವಾಣ ದಿನ ಆಚರಣೆ ಮಾಡುವ ನೈತಿಕ ಹಕ್ಕು ಇಲ್ಲ ಎಂದು ದೂರಿದ ಪ್ರತಿಭಟನಾಕಾರರು, ಈ ಕೂಡಲೇ ದಲಿತ ಮುಖಂಡರ ಸಭೆ ನಡೆಸಬೇಕು. ಇಲ್ಲವಾದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ನಿರಂತರ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ತಾಪಂ ಸದಸ್ಯ ಆಲೂರು ನಿಂಗರಾಜ್, ಜಿಲ್ಲಾ ಸಂಚಾಲಕ ಹೆಗ್ಗೆರೆ ರಂಗಪ್ಪ, ಪುಣಭಘಟ್ಟ ನಿಂಗಪ್ಪ, ಪರಶುರಾಮ್, ಪರಸಪ್ಪ, ಸುರೇಶ್, ಲಕ್ಷ್ಮಣ್, ಹನುಮಂತಪ್ಪ, ಅಂಜಿನಪ್ಪ ಮತ್ತಿತರರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News