×
Ad

ಬಾಬ್ರಿ ಮಸೀದಿ ಧ್ವಂಸಕ್ಕೆ 25 ವರ್ಷ: ಬಿಜೆಪಿ ಸಂಭ್ರಮ, ಎಸ್‌ಡಿಪಿಐ ಪ್ರತಿಭಟನೆ

Update: 2017-12-06 23:06 IST

ಗುಂಡ್ಲುಪೇಟೆ, ಡಿ. 6: ಬಾಬರಿ ಮಸೀದಿ ಉರುಳಿಸಿ 25 ವರ್ಷ ತುಂಬಿದ ಹಿನ್ನೆಲೆಯಲ್ಲಿ ಬಿಜೆಪಿ ಸಂಭ್ರಮಾಚರಣೆ ನಡೆಸಿದರೆ ಎಸ್‌ಡಿಪಿಐ ಪ್ರತಿಭಟನೆ ನಡೆಸಿತು.

ಉತ್ತರ ಪ್ರದೇಶದಲ್ಲಿ ಕರಸೇವಕರು ರಾಮಮಂದಿರ ನಿರ್ಮಾಣಕ್ಕಾಗಿ ಬಾಬರಿ ಮಸೀದಿ ಕೆಡವಿದ ಬಗ್ಗೆ ಬಿಜೆಪಿ ಯುವ ಮೋರ್ಚಾ ಸಂಭ್ರಮಾಚರಣೆ ನಡೆಸಿತು. ಪಟ್ಟಣದ ಜೋಡಿ ರಸ್ತೆಯಲ್ಲಿರುವ ಆಂಜನೇಯಸ್ವಾಮಿ ದೇವಸ್ಥಾನ ಹಾಗೂ ವಿಜಯನಾರಾಯಣಸ್ವಾಮಿ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪ್ರಣಯ್, ತಾಲೂಕು ಅಧ್ಯಕ್ಷ ನಂದೀಶ್ ಹಾಗೂ ಕಾರ್ಯಕರ್ತರು ಶೀಘ್ರವೇ ರಾಮಮಂದಿರ ನಿರ್ಮಾಣಗಾಲಿ ಎಂದು ಪ್ರಾರ್ಥಿಸಿದರು.

 ಪಟ್ಟಣದ ಟಿಪ್ಪು ವೃತ್ತದಲ್ಲಿ ಎಸ್‌ಡಿಪಿಐ ತಾಲೂಕು ಅಧ್ಯಕ್ಷ ಮನ್ಸೂರ್ ನೇತೃತ್ವದಲ್ಲಿ ಮಾನವ ಸರಪಳಿ ರಚಿಸಿದ ಕಾರ್ಯಕರ್ತರು ಬಾಬರಿ ಮಸೀದಿ ಧ್ವಂಸ ಪ್ರಕರಣ ರಾಷ್ಟ್ರೀಯ ಅವಮಾನವಾಗಿದೆ. ಆದ್ದರಿಂದ ದ್ವಂಸಮಾಡಿದವರ ವಿರುದ್ಧ ಕ್ರಮಕೈಗೊಳ್ಳಬೇಕು, ಅದೇ ಸ್ಥಳದಲ್ಲಿ ಮತ್ತೆ ಮಸೀದಿ ನಿರ್ಮಿಸುವವರೆಗೂ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪಟ್ಟಣದ ಸೂಕ್ಷ್ಮ ಪ್ರದೇಶಗಳು ಹಾಗೂ ಆಯಕಟ್ಟಿನ ಸ್ಥಳಗಳಲ್ಲಿ ಪಟ್ಟಣ ಠಾಣೆಯ ಪಿಎಸ್ ಐ.ಬಿ.ಎಸ್. ಶಿವರುದ್ರ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News