ಬ್ಯಾಂಕ್ ಖಾತೆ ಸಹಿತ ವಿವಿಧ ಯೋಜನೆಗಳಿಗೆ ಆಧಾರ್ ಜೋಡಣೆ: ಗಡುವು ವಿಸ್ತರಣೆ

Update: 2017-12-07 08:19 GMT

ಹೊಸದಿಲ್ಲಿ, ಡಿ.7: ಬ್ಯಾಂಕ್ ಖಾತೆಗಳು ಸಹಿತ ವಿವಿಧ ಯೋಜನೆಗಳಿಗೆ ಆಧಾರ್ ಜೋಡಣೆ ಕಡ್ಡಾಯ ಗಡುವನ್ನು 2018ರ ಮಾರ್ಚ್ 31ರ ತನಕ ವಿಸ್ತರಣೆ ಮಾಡಲಾಗುವುದು ಎಂದು ಕೇಂದ್ರ ಸರಕಾರ ಗುರುವಾರ ಸುಪ್ರೀಂಕೋರ್ಟ್‌ಗೆ ಮಾಹಿತಿ ನೀಡಿದೆ.

ನ್ಯಾಯಾಲಯದ ಆದೇಶದ ಅನುಸಾರ 2018ರ ಫೆ.6ರೊಳಗೆ ಮೊಬೈಲ್ ಸೇವೆಗೆ ಆಧಾರ್ ಜೋಡಣೆಯನ್ನು ಮಾಡಲು ಗಡುವು ನೀಡಲಾಗಿದೆ ಎಂದು ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ತಿಳಿಸಿದ್ದಾರೆ.

ಜಸ್ಟಿಸ್ ಶ್ರೀಕೃಷ್ಣ ನೇತೃತ್ವದ ದತ್ತಾಂಶ ಸಂರಕ್ಷಣಾ ಸಮಿತಿಯು 2018ರ ಫೆಬ್ರವರಿಯಲ್ಲಿ ತನ್ನ ಅಂತಿಮ ವರದಿ ಸಲ್ಲಿಸಲಿದೆ ಎಂದು ಅಟಾರ್ನಿ ಜನರಲ್ ಅವರು ಸುಪ್ರೀಂಕೋರ್ಟ್‌ಗೆ ಮಾಹಿತಿ ನೀಡಿದರು.

ಸರಕಾರದ ವಿವಿಧ ಯೋಜನೆ ಹಾಗೂ ಸೇವೆಗಳಿಗೆ ಆಧಾರ್ ಜೋಡಣೆ ಕಡ್ಡಾಯ ಮಡುವ ಕೇಂದ್ರ ಸರಕಾರದ ನಿರ್ಧಾರಕ್ಕೆ ತಡೆ ಹೇರಬೇಕೆಂದು ಕೋರಿ ಸಲ್ಲಿಸಿರುವ ಮಧ್ಯಂತರ ಅರ್ಜಿಯ ವಿಚಾರಣೆಗೆ ಮುಂದಿನ ವಾರ ಸಂವಿಧಾನ ಪೀಠವನ್ನು ರಚಿಸಲಾಗುವುದು ಎಂದು ಸುಪ್ರೀಂಕೋರ್ಟ್‌ನ ಮೂವರು ನ್ಯಾಯಾಧೀಶರ ಪೀಠ ತಿಳಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News