ವಿಚಾರಣೆಗೆ ಹಾಜರಾಗದ ಶಾಸಕ ಸೋಮಶೇಖರ್ : ಜಾಮೀನು ರಹಿತ ಬಂಧನದ ವಾರೆಂಟ್ ಜಾರಿ
Update: 2017-12-07 19:33 IST
ಮೈಸೂರು,ಡಿ.7: ನ್ಯಾಯಲದಲ್ಲಿನ ವಿಚಾರಣೆಗೆ ಹಾಜರಾಗದ ಕಾರಣ ಕೆ.ಆರ್.ಕ್ಷೇತ್ರದ ಶಾಸಕ ಎಂ.ಕೆ.ಸೋಮಶೇಖರ್ ಅವರಿಗೆ ಮೈಸೂರು ನ್ಯಾಯಾಲಯ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿ ಮಾಡಿದೆ.
ಶಾಸಕ ಎಂ.ಕೆ.ಸೋಮಶೇಖರ್ ಅವರು ಪಾಲಿಕೆಯ ಮಾಜಿ ಸದಸ್ಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದು, ಶಾಸಕರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಾಗಿತ್ತು. ಶಾಸಕರು ಸುಳ್ಳು ಮಾಹಿತಿ ನೀಡಿ ಗ್ಯಾಸ್ ಏಜೆನ್ಸಿ ಪಡೆದಿದ್ದಾರೆಂದು ಪಾಲಿಕೆಯ ಮಾಜಿ ಸದಸ್ಯ ಎಂ.ಸಿ.ಚಿಕ್ಕಣ್ಣ ದಾಖಲೆಗಳ ಸಹಿತ ಪತ್ರಿಕಾ ಹೇಳಿಕೆ ನೀಡಿದ್ದರು.
ಆದರೆ ಶಾಸಕರು ಅವಹೇಳನಕಾರಿ ಹೇಳಿಕೆಯನ್ನು ನೀಡಿದ್ದು, ಈ ಕುರಿತು ಎಂ.ಸಿ.ಚಿಕ್ಕಣ್ಣ ಮೈಸೂರಿನ ಜೆ.ಎಂ.ಎಫ್ ಸಿ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಡಿ.4ರಂದು ಶಾಸಕರ ವಿಚಾರಣೆಯಿತ್ತು. ಶಾಸಕರು ನ್ಯಾಯಾಲಯಕ್ಕೆ ಹಾಜರಾಗದ ಕಾರಣ ನ್ಯಾಯಾಲಯ ಜಾಮೀನು ರಹಿತ ಬಂಧನದ ವಾರಂಟ್ ಹೊರಡಿಸಿ ಆದೇಶ ನೀಡಿದೆ.