ಬೈಕ್ ನಲ್ಲಿ ಬಂದು ಮಹಿಳೆಯ ಚಿನ್ನದ ಸರ ಕಸಿದು ಪರಾರಿ
Update: 2017-12-07 19:35 IST
ಮೈಸೂರು,ಡಿ.7: ಬೈಕ್ ನಲ್ಲಿ ಬಂದ ದುಷ್ಕರ್ಮಿಗಳಿಬ್ಬರು ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಸರ ಎಗರಿಸಿದ ಘಟನೆ ಜೆ.ಪಿ.ನಗರದಲ್ಲಿ ನಡೆದಿದೆ.ಎನ್ ಐಇ ಕಾಲೇಜು ಬಳಿಯ ನಿವಾಸಿ ಶಾಂತಮ್ಮ(63)ಸರ ಕಳೆದುಕೊಂಡವರಾಗಿದ್ದಾರೆ. ಇವರು ಜೆಪಿ ನಗರದಲ್ಲಿರುವ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದು ಮನೆಗೆ ತೆರಳುವಾಗ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಅವರ ಕತ್ತಿನಲ್ಲಿದ್ದ 48ಗ್ರಾಂ ತೂಕದ ಚಿನ್ನದ ಸರ ಕಸಿದು ಪರಾರಿಯಾಗಿದ್ದಾರೆ.
ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಸಿಸಿಬಿ ಎಸಿಪಿ ಗೋಪಾಲ್, ವಿದ್ಯಾರಣ್ಯಪುರಂ ಠಾಣೆಯ ಇನ್ಸಪೆಕ್ಟರ್ ಓಂಕಾರಪ್ಪ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ. ಈ ಸಂಬಂಧ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.