×
Ad

ಕೆಪಿಸಿಸಿ ಹಿಂದುಳಿದ ವರ್ಗಕ್ಕೆ ಬಿ.ಎಸ್.ಪ್ರಶಾಂತ್ ನೇಮಕ

Update: 2017-12-07 20:15 IST

ಚಿಕ್ಕಮಗಳೂರು, ಡಿ.7: ರಾಜ್ಯ ಹಾಗೂ ರಾಷ್ಟ್ರೀಯ ಕಾಂಗ್ರೆಸ್ ಮುಖಂಡರ ನಿರ್ದೇಶನದಂತೆ ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎಂ.ಡಿ.ಲಕ್ಷ್ಮೀನಾರಾಯಣರವರು ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಉಪಾಧ್ಯಕ್ಷರನ್ನಾಗಿ ತಮ್ಮನ್ನು ನೇಮಕ ಮಾಡಿದ್ದಾರೆಂದು ಬಿ.ಎಸ್. ಪ್ರಶಾಂತ್ ತಿಳಿಸಿದರು.

ಅವರು ಗುರುವಾರ ನಗರದಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ, ಪಕ್ಷದ ಸಂಘಟನೆ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು, ಮುಂದಿನ ದಿನಗಳಲ್ಲಿ ಪಕ್ಷದ ಸಂಘಟನೆಯಲ್ಲಿ ಹೆಚ್ಚು ಸಕ್ರೀಯವಾಗುವುದಾಗಿ ತಿಳಿಸಿದರು.

ತಾವು ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷರಾಗಿ ನೇಮಕವಾಗಲು ಸಹಕರಿಸಿದ ಎಂ.ಡಿ. ಸತ್ಯನಾರಾಯಣ್, ಸಿ.ಎಂ. ಸಿದ್ದರಾಮಯ್ಯ, ಮಾಜಿ ವಿಧಾನ ಪರಿಷತ್ ಸದಸ್ಯೆ ಗಾಯತ್ರಿಶಾಂತೇಗೌಡ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಡಿ.ಎಲ್. ವಿಜಯ್‍ಕುಮಾರ್ ಹಿಂದೂಳಿದ ವರ್ಗಗಳ ಜಿಲ್ಲಾಧ್ಯಕ್ಷ ನಾಗರಾಜ್ ಹಾಗೂ ಕಾಂಗ್ರೆಸ್ ಮುಖಂಡರಿಗೆ ಅಭಿನಂದಿಸಿದರು.

ಜಿಲ್ಲಾ ಮಟ್ಟದ ಹಿಂದೂಳಿದ ವರ್ಗಗಳ ಜಿಲ್ಲಾಧ್ಯಕ್ಷ ನಾಗರಾಜ್‍ರವರು, ಚಂದ್ರಶೇಖರ್ ನರಗನಹಳ್ಳಿಯವರನ್ನು ಪ್ರಧಾನ ಕಾರ್ಯದರ್ಶಿಯಾಗಿ, ಜಯಚಂದ್ರಶೇಖರ್‍ರವರನ್ನು ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ತಿಳಿಸಿದರು.ಸುದ್ಧಿಗೋಷ್ಠಿಯಲ್ಲಿ ನರಗನಹಳ್ಳಿ ಚಂದ್ರಶೇಖರ್, ಸೋಮಶೇಖರ್ ಮತ್ತಿತರರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News