ಮೀನುಗಾರರ ಸಹಕಾರ ಸಂಘಕ್ಕೆ ಅತ್ಯುತ್ತಮ ಸಾಧನಾ ಪ್ರಶಸ್ತಿ
Update: 2017-12-07 23:23 IST
ಮಂಗಳೂರು, ಡಿ. 7: ಸುಮಾರು 37 ವರ್ಷಗಳಿಂದ ಮೀನುಗಾರಿಕಾ ಮತ್ತು ಡೀಸೆಲ್ ವಿತರಣೆಯ ಅತ್ಯುತ್ತಮ ಸಾಧನೆಗಾಗಿ ಮಂಗಳೂರು ಯಾಂತ್ರಿಕ ಮೀನುಗಾರರ ಪ್ರಾಥಮಿಕ ಸಹಕಾರ ಸಂಘಕ್ಕೆ ಅತ್ಯುತ್ತಮ ಸಾಧನಾ ಪ್ರಶಸ್ತಿ ಲಭಿಸಿದೆ.
ಮಂಗಳೂರಿನಲ್ಲಿ ಇತ್ತೀಚೆಗೆ ಜರಗಿದ ರಾಜ್ಯಮಟ್ಟದ 64ನೆ ಅಖಿಲ ಭಾರತ ಸಹಕಾರ ಸಪ್ತಾಹ 2017 ಸಮಾರಂಭದಲ್ಲಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಪ್ರಶಸ್ತಿ ಪ್ರದಾನ ಮಾಡಿದ್ದಾರೆ.
ಕಾರ್ಯಕ್ರಮದಲ್ಲಿ ಸಂಘದ ಉಪಾದ್ಯಕ್ಷ ಉಮೇಶ್ ಟಿ. ಕರ್ಕೇರ ಹಾಗೂ ಕಾರ್ಯದರ್ಶಿ ಟಿಶನ್ ಕುಮಾರ್ ಅವರನ್ನು ಸನ್ಮಾನಿಸಲಾಯಿತು.ಜಿಲ್ಲಾ ಉಸ್ತುವಾರಿ ಹಾಗೂ ಅರಣ್ಯ ಮತ್ತು ಪರಿಸರ ಖಾತೆ ಸಚಿವ ಬಿ. ರಮಾನಾಥ ರೈ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.