ಶಿಕ್ಷಣ ತಜ್ಞ ನಿರಂಜನಾರಾಧ್ಯರಿಗೆ ಬೆದರಿಕೆ: ಭದ್ರತೆ ಒದಗಿಸಲು ರಾಜ್ಯ ಸರಕಾರಕ್ಕೆ ಮನವಿ

Update: 2017-12-08 15:01 GMT

ಬೆಂಗಳೂರು, ಡಿ.8: ಸರಕಾರಿ ಶಾಲೆಗಳ ಸಬಲೀಕರಣ ಸಮಿತಿಯಲ್ಲಿ ವಿಶೇಷ ತಜ್ಞರಾಗಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಣ ತಜ್ಞ ಡಾ.ನಿರಂಜನಾರಾಧ್ಯರಿಗೆ ಕೆಲವು ದುಷ್ಕರ್ಮಿಗಳಿಂದ ಬೆದರಿಕೆ ಕರೆಗಳು ಬಂದಿದ್ದು, ಅವರಿಗೆ ಸರಕಾರ ಸೂಕ್ತ ಭದ್ರತೆ ಒದಗಿಸಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಜಿ.ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

  ಸರಕಾರಿ ಶಾಲೆಗಳ ಸಬಲೀಕರಣ ಸಮಿತಿಯು ಕಳೆದ ಸೆ.4, 2017ರಂದು ರಾಜ್ಯ ಸರಕಾರಕ್ಕೆ ಸರಕಾರಿ ಶಾಲೆಗಳ ಸಬಲೀಕರಣಕ್ಕೆ ಸಂಬಂಧಿಸಿದಂತೆ ಒಂದು ವರದಿಯನ್ನು ನೀಡಿರುತ್ತದೆ. ಇದನ್ನು ಸಹಿಸದ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಈ ಸಮಿತಿಯಲ್ಲಿ ವಿಶೇಷ ತಜ್ಞರಾಗಿ ಕೆಲಸ ಮಾಡುತ್ತಿರುವ ನಿರಂಜನಾರಾಧ್ಯರ ಮೊಬಲ್‌ಗೆ ಕರೆ ಮಾಡಿ ಬೆದರಿಕೆ ಒಡ್ಡಿರುತ್ತಾರೆ.

 ಶಿಕ್ಷಣ ತಜ್ಞ ನಿರಂಜನಾರಾಧ್ಯರು ನಾಡಿನ ಶ್ರೇಷ್ಟ ಚಿಂತಕರಾಗಿದ್ದಾರೆ. ಹಾಗೂ ಕನ್ನಡ ಶಾಲೆಗಳ ಉಳಿವಿಗಾಗಿ ತಮ್ಮ ಇಡೀ ಬದುಕನ್ನು ಮೀಸಲಿಟ್ಟಿದ್ದಾರೆ. ಹೀಗಾಗಿ ಅವರಿಗೆ ಸೂಕ್ತ ಭದ್ರತೆ ಒದಗಿಸುವುದು ಸರಕಾರ ಕರ್ತವ್ಯವಾಗಿದೆ ಎಂದು ಅವರು ಪತ್ರಿಾ ಪ್ರಕಟನೆಯಲ್ಲಿ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News