×
Ad

ಕೊಡಗು: ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಮತ್ರಂಡ ರೇಖಾಪೊನ್ನಪ್ಪ ಆಯ್ಕೆ

Update: 2017-12-08 21:34 IST

ಮಡಿಕೇರಿ ಡಿ.8 :ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಹಿಳಾ ಘಟಕದ ಜಿಲ್ಲಾ ಕಾರ್ಯದರ್ಶಿಯನ್ನಾಗಿ ಬೇಗೂರು ಗ್ರಾ.ಪಂ ಅಧ್ಯಕ್ಷರಾದ ಮತ್ರಂಡ ರೇಖಾಪೊನ್ನಪ್ಪ ಅವರನ್ನು ಆಯ್ಕೆ ಮಾಡಿರುವುದಾಗಿ ಮಹಿಳಾ ಕಾಂಗ್ರೆಸ್‍ನ ಜಿಲ್ಲಾಧ್ಯಕ್ಷರಾದ ಜಿ.ಆರ್.ಪುಷ್ಪಲತಾ ತಿಳಿಸಿದ್ದಾರೆ.

 ಜಿಲ್ಲೆಯಲ್ಲಿ ಮಹಿಳಾ ಕಾಂಗ್ರೆಸ್ ಘಟಕ ಹೆಚ್ಚು ಚಟುವಟಿಕೆಯಿಂದ ಕಾರ್ಯನಿರ್ವಹಿಸುತ್ತಿದ್ದು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ ಎಂದು ಪುಷ್ಪಲತಾ ಪತ್ರಿಕಾ ಹೇಳಿಕೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News