×
Ad

ನೇಣು ಬಿಗಿದು ಆತ್ಮಹತ್ಯೆ

Update: 2017-12-08 21:59 IST

ಮಣಿಪಾಲ, ಡಿ.8: ಅತೀಯಾದ ಮದ್ಯ ಸೇವನೆಯ ಚಟವನ್ನು ಹೊಂದಿದ್ದ ಮದ್ಯ ವಯಸ್ಕರೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಬಳಿ ಇರುವ ಹಾಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಳ್ಳಿ ಗ್ರಾಮದ ಸಗ್ರಿನೊಳೆ ಎಂಬಲ್ಲಿ ನಡೆದಿದೆ.

ಮೃತರನ್ನು ತಿಮ್ಮ ನಾಯ್ಕ (48) ಎಂದು ಗುರುತಿಸಲಾಗಿದೆ. ಇವರು ಗುರುವಾರ ಬೆಳಗ್ಗೆ 9ರಿಂದ ಅಪರಾಹ್ನ 1:30ರ ನಡುವಿನ ಅವಧಿಯಲ್ಲಿ ಮನೆ ಸಮೀಪದ ಹಾಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News