×
Ad

ಶಿರಸಿಯಲ್ಲಿ ಇಂದು ವಿಕಲಚೇತನರ ಅದಾಲತ್

Update: 2017-12-08 22:50 IST

ಶಿರಸಿ, ಡಿ.8: ಸ್ಥಳೀಯ ನ್ಯಾಯಾಲಯದ ಆವರಣದಲ್ಲಿ ಡಿ.9 ರಂದು ಶನಿವಾರ ಬೆಳಗ್ಗೆ 10 ಗಂಟೆಗೆ ವಿಕಲಚೇತನರ ಅದಾಲತ್‌ನ್ನು ಸಂಘಟಿಸಲಾಗಿದೆ. ವಿಕಲಚೇತನರ ಸಮಸ್ಯೆಗಳಿಗೆ ಸ್ಪಂದಿಸುವ ದಿಸೆಯಲ್ಲಿ ಹಮ್ಮಿಕೊಂಡಿರುವ ಅದಾಲತ್ ಕಾರ್ಯಕ್ರಮದಲ್ಲಿ ವಿಕಲಚೇತನರು ಪ್ರಯೋಜನ ಪಡೆದುಕೊಳ್ಳಬೇಕೆಂದು ತಾಲೂಕು ಕಾನೂನು ಸೇವೆಗಳ ಸಮಿತಿ ಪ್ರಕಟನೆಯಲ್ಲಿ ತಿಳಿಸಿದೆ.

ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ನಗರಸಭೆೆ ಶಿರಸಿ ಇದರ ಸಂಯುಕ್ತ ಆಶ್ರಯದಲ್ಲಿ ತಾಲೂಕು ಕಂದಾಯ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಕಾರ್ಯಕ್ರಮ ಜರುಗಲಿದ್ದು ಬೆಳಗ್ಗೆ 9:30ರಿಂದ ಸ್ಥಳದಲ್ಲಿಯೇ ನೋಂದಣಿ ಕಾರ್ಯ ನಡೆಯಲಿದೆ.

ವಿಕಲಚೇತನರ ಸಮಸ್ಯೆಗಳಿಗೆ ಸ್ಪಂದಿಸುವ ದಿಸೆಯಲ್ಲಿ ರಾಜ್ಯದಲ್ಲಿಯೇ ಮಾದರಿ ರೀತಿಯಲ್ಲಿ ಜರುಗಲಿರುವ ಅದಾಲತ್‌ನಲ್ಲಿ ಉನ್ನತ ಅಧಿಕಾರಿಗಳು ಹಾಜರಿರುತ್ತಾರೆ. ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳಬೇಕೆಂದು ಪ್ರಕಟನೆಯಲ್ಲಿ ಕೋರ ಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News