ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯರಿಗೆ ‘ಮಹಾವೀರ ಶಾಂತಿ ಪ್ರಶಸ್ತಿ’

Update: 2017-12-08 17:30 GMT

ಬೆಂಗಳೂರು, ಡಿ.8: ಶ್ರವಣಬೆಳಗೊಳ ಮಠದ ಪೀಠಾಧ್ಯಕ್ಷರಾದ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯರನ್ನು 2017ನೇ ಸಾಲಿನ ಮಹಾವೀರ ಶಾಂತಿ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ ತಿಳಿಸಿದ್ದಾರೆ.

ಪ್ರಶಸ್ತಿಯು 10 ಲಕ್ಷ ರೂ.ನಗದು, ಸ್ಮರಣಿಕೆ ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಹಿರಿಯ ಸಾಹಿತಿ ಜಿನದತ್ತ ದೇಸಾಯಿ ಅವರ ಅಧ್ಯಕ್ಷತೆಯ ಸಮಿತಿಯು ಈ ಆಯ್ಕೆ ಮಾಡಿದ್ದು, ಮಹಾವೀರ ಜಯಂತಿಯ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಭಟ್ಟಾರಕ ಪಟ್ಟಾಚಾರ್ಯರು 44 ವರ್ಷಗಳಿಂದ ಶ್ರವಣಬೆಳಗೊಳ ಮಠದ ಪೀಠಾಧ್ಯಕ್ಷರಾಗಿ ಜನಹಿತ ಮತ್ತು ಆಧ್ಯಾತ್ಮ ಕೈಂಕರ್ಯದಲ್ಲಿ ತೊಡಗಿದ್ದು, ಪ್ರಾಕೃತ ಅಧ್ಯಯನ ಸಂಸ್ಥೆ ಸ್ಥಾಪನೆ ಮಾಡಿದ್ದಾರೆ. ಅನೇಕ ಮಹತ್ವದ ಕೃತಿಗಳನ್ನು ಪ್ರಕಟಿಸಿದ್ದಾರೆ ಎಂದು ತಿಳಿಸಿದ್ದಾರೆ.

ಅನ್ನದಾಸೋಹ ಮತ್ತು ಜ್ಞಾನದಾಸೋಹ ಎರಡನ್ನೂ ನಡೆಸುವ ಮೂಲಕ ಸಾಮಾಜಿಕ ಉನ್ನತಿಗೆ ಶ್ರಮಿಸಿದ್ದಾರೆ. ಧಾರ್ಮಿಕ ಸಭೆಗಳ ಜೊತೆಗೆ ಸಾಹಿತ್ಯಕ ಸಭೆಗಳನ್ನು ಆಯೋಜಿಸುತ್ತಿದ್ದಾರೆ. ಶ್ರವಣಬೆಳಗೊಳ ಮಠ ಸಮಾಜಮುಖಿ ಯಾಗಿ ಶ್ರಮಿಸುತ್ತಿದೆ ಎಂದು ಅವರು ಬಣ್ಣಿಸಿದ್ದಾರೆ.

ರಾಜ್ಯದಲ್ಲಿ ಸರ್ವರಿಗೂ ಶಿಕ್ಷಣ, ಆರೋಗ್ಯ ಒದಗಿಸುವಲ್ಲಿ ಕ್ರೈಸ್ತ ಮಿಷನರಿಗಳ ಪಾತ್ರ ಮಹತ್ವದಾಗಿತ್ತು. ಕ್ರಿಶ್ಚಿಯನ್ ಧರ್ಮ ಪ್ರಚಾರದ ಉದ್ದೇಶದಿಂದ ಇಲ್ಲಿಗೆ ಆಗಮಿಸಿದ್ದರೂ ಇಲ್ಲಿನ ಸಾಮಾಜಿಕ, ಸಾಹಿತ್ಯ ಬೆಳವಣಿಗೆಯನ್ನು ಕ್ರಿಶ್ಚಿಯನ್ ಪಾದ್ರಿಗಳು ಗಣನೀಯ ಪಾತ್ರವಹಿಸಿದ್ದರು. ಆದರೆ, ತದನಂತರದ ದಿನಗಳಲ್ಲಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ಮೇಲ್ಜಾತಿಗಳಿಂದಾಗಿ ದಲಿತ ಕ್ರೈಸ್ತರು ಶೋಷಣೆಗೆ ಒಳಗಾಗುವಂತಾಗಿದೆ.

-ಡಾ.ಗಾಡ್ವಿನ್ ಶೆರಿ, ಸಂಶೋಧಕ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News