ಲೋಕಾಯುಕ್ತದ ಭ್ರಷ್ಟಾಚಾರ ಪ್ರಕರಣ: 5.3 ಕೋಟಿ ರೂ.ಮೌಲ್ಯದ ಆಸ್ತಿ ಜಪ್ತಿ

Update: 2017-12-09 12:27 GMT

ಬೆಂಗಳೂರು, ಡಿ.9: ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣದ ಆರೋಪಿ ವಿ.ಭಾಸ್ಕರ್‌ಗೆ ಸೇರಿದ 5.3ಕೋಟಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ.

ಲೋಕಾಯುಕ್ತ ನ್ಯಾ.ವೈ.ಭಾಸ್ಕರರಾವ್ ಪುತ್ರ ವೈ.ಅಶ್ವಿನ್ ರಾವ್, ತಮ್ಮ ತಂದೆಯ ಅಧಿಕಾರ ದುರುಪಯೋಗ ಮಾಡಿಕೊಂಡು ಸರಕಾರಿ ಅಧಿಕಾರಿಗಳನ್ನು ಬೆದರಿಸಿ ಹಣ ಸಂಪಾದನೆ ಮಾಡಿದ್ದಾರೆ ಎಂಬ ಆರೋಪದಲ್ಲಿ ಲೋಕಾಯುಕ್ತ ಪೊಲೀಸರು 2015 ರ ಜುಲೈ 15ರಂದು ಎಫ್‌ಐಆರ್ ದಾಖಲಿಸಿದ್ದರು.

ಈ ಕುರಿತು ತನಿಖೆ ನಡೆಸಿದ್ದ ಎಸ್‌ಐಟಿ, ಆರು ಜನರ ಜನರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿತು. ಎಸ್‌ಐಟಿ ದೋಷಾರೋಪ ಪಟ್ಟಿ ಆಧರಿಸಿ ತನಿಖೆ ಕೈಗೆತ್ತಿಕೊಂಡ ಇ.ಡಿ ಅಧಿಕಾರಿಗಳು, ಅಶ್ವಿನ್‌ರಾವ್‌ರಿಂದ 2016ರ ಜನವರಿಯಲ್ಲಿ 6.2ಕೋಟಿ ರೂ.ಮುಟ್ಟುಗೋಲು ಹಾಕಿಕೊಂಡಿದ್ದರು.

ಈಗ ಹೆಚ್ಚುವರಿಯಾಗಿ ವಿ.ಭಾಸ್ಕರ್ ಹೆಸರಿನಲ್ಲಿ ದೊರೆತ 5.3 ಕೋಟಿ ರೂ.ಮೌಲ್ಯದ ಆಸ್ತಿಯನ್ನೂ ಜಪ್ತಿ ಮಾಡಲಾಗಿದೆ. ಒಟ್ಟಾರೆ ಈ ಪ್ರಕರಣದಲ್ಲಿ 11.5 ಕೋಟಿ ವೌಲ್ಯದ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News