ಗುಜರಾತ್ ಚುನಾವಣೆ: ಮೊದಲ ಹಂತದಲ್ಲಿ 68% ಮತದಾನ; ಚು.ಆಯೋಗ
Update: 2017-12-09 21:46 IST
ಅಹ್ಮದಾಬಾದ್, ಡಿ.9: ಗುಜರಾತ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಯ ಮೊದಲ ಹಂತದಲ್ಲಿ 68% ಮತದಾನವಾಗಿದೆ ಎಂದು ಜಿರಿಯ ಸಹಾಯಕ ಚುನಾವಣಾ ಆಯುಕ್ತ ಉನ್ಮೇಶ್ ಸಿನ್ಹಾ ತಿಳಿಸಿದ್ದಾರೆ. ರಾಜ್ಯದ 182 ವಿಧಾನಸಭಾ ಕ್ಷೇತ್ರಗಳ ಪೈಕಿ 89 ಕ್ಷೇತ್ರಗಳಿಗೆ ಶನಿವಾರ ಮತದಾನ ನಡೆದಿದ್ದು ಮುಖ್ಯಮಂತ್ರಿ ವಿಜಯ್ ರುಪಾನಿ ಸೇರಿದಂತೆ ಕಾಂಗ್ರೆಸ್‌ನ ಶಕ್ತಿಸಿನ್ಹಾ ಗೊಹಿಲ್ ಮತ್ತು ಪರೇಶ್ ಧನಾನಿಯ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರವಾಗಿದೆ. ಈ ಚುನಾವಣೆ ಪ್ರಧಾನಿ ನರೇಂದ್ರ ಮೋದಿಯವರ ಪ್ರತಿಷ್ಠೆಯ ವಿಷಯವಾಗಿದ್ದರೆ ಸದ್ಯವೇ ಪಕ್ಷದ ಚುಕ್ಕಾಣಿ ಹಿಡಿಯಲಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಇದು ಸತ್ವಪರೀಕ್ಷೆಯ ಕಣವಾಗಿದೆ. ಉಳಿದ 93 ಕ್ಷೇತ್ರಗಳಿಗೆ ಎರಡನೇ ಹಂತದ ಮತದಾನ ಡಿಸೆಂಬರ್ 14ರಂದು ನಡೆಯಲಿದ್ದು ಡಿಸೆಂಬರ್ 18ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.