ಪುತ್ತೂರು: ಅಫಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಮೃತ್ಯು

Update: 2017-12-09 17:28 GMT

ಪುತ್ತೂರು, ಡಿ. 9: ಪುತ್ತೂರು ನಗರದ ಹೊರವಲಯದ ಚಿಕ್ಕಮುಡ್ನೂರು ಗ್ರಾಮದ ಕೆಮ್ಮಾಯಿ ಎಂಬಲ್ಲಿ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಶುಕ್ರವಾರ ಕಾರು ಮತ್ತು ಬೈಕೊಂದರ ನಡುವೆ ಢಿಕ್ಕಿ ಸಂಭವಿಸಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಬೆಳ್ತಂಗಡಿ ತಾಲ್ಲೂಕಿನ ಲಾಯಿಲ ಗ್ರಾಮದ ಸೋಮಯ್ಯ ಅವರ ಪುತ್ರ ಪುಷ್ಪಕರ (49) ಮೃತರು ಎಂದು ಗುರುತಿಸಲಾಗಿದೆ.

ಪುತ್ತೂರಿನಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಕಾರು ಮತ್ತು ಉಪ್ಪಿನಂಗಡಿ ಕಡೆಯಿಂದ ಪುತ್ತೂರು ಕಡೆಗೆ ಪುಷ್ಪಕರ ಅವರು ಚಲಾಯಿಸಿಕೊಂಡು ಬರುತ್ತಿದ್ದ ಬೈಕ್ ನಡುವೆ ಕೆಮ್ಮಾಯಿ ಪೆಟ್ರೋಲ್ ಪಂಪ್ ಬಳಿ ಢಿಕ್ಕಿ ಸಂಭವಿಸಿತ್ತು. ಘಟನೆಯ ವೇಳೆ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಪುಷ್ಪಕರ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸುವ ಪ್ರಯತ್ನ ನಡೆಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಪುತ್ತೂರು ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News