×
Ad

ಕೇದಾರ್ ಜಾಧವ್ ಗಾಯಾಳು

Update: 2017-12-09 23:24 IST

ಧರ್ಮಶಾಲಾ, ಡಿ.9: ಕೇದಾರ್ ಜಾಧವ್ ಅವರು ಗಾಯಗೊಂಡಿರುವ ಹಿನ್ನೆಲೆಯಲ್ಲಿ ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಲಭ್ಯರಿಲ್ಲ.

ಜಾಧವ್ ಬದಲಿಗೆ ತಮಿಳುನಾಡಿನ ಆಲ್‌ರೌಂಡರ್ ವಾಶಿಂಗ್ಟನ್ ಸುಂದರ್ ಅವರನ್ನು ತಂಡದಲ್ಲಿ ಸೇರಿಸಿಕೊಳ್ಳಲಾಗಿದೆ.

ಜಾಧವ್ ಅವರು ಬೆಂಗಳೂರಿನಲ್ಲಿ ರಾಷ್ಟ್ರೀಯ ಕ್ರಿಕೆಟ್ ಅಕಾಡಮಿಯಲ್ಲಿ ಪುನಶ್ಚೇತನಾ ಶಿಬಿರಲ್ಲಿ ಅಭ್ಯಾಸ ನಡೆಸಲಿದ್ದಾರೆ.

 ಮಧ್ಯಮ ಸರದಿಯ ದಾಂಡಿಗ ಜಾಧವ್ ಅವರು ಗಾಯದ ಸಮಸ್ಯೆಯಿಂದ ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಳ್ಳದ ಹಿನ್ನೆಲೆಯಲ್ಲಿ ಲಂಕಾ ವಿರುದ್ಧದ ಏಕದಿನ ಸರಣಿಗೆ ತಂಡದ ಸೇವೆಗೆ ಲಭ್ಯರಿಲ್ಲ ಎಂದು ಅಧಿಕೃತ ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News