ದಂಗಲ್ ನಟಿ ಝೈರಾಗೆ ವಿಮಾನದಲ್ಲಿ ಲೈಂಗಿಕ ಕಿರುಕುಳ

Update: 2017-12-10 05:12 GMT

ಹೊಸದಿಲ್ಲಿ, ಡಿ.10: ಆಮಿರ್ ಖಾನ್ ಅಭಿನಯದ ‘ದಂಗಲ್’ ಚಿತ್ರದ ನಟಿ ಝೈರಾ ವಾಸಿಂ ಅವರು ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮಧ್ಯವಯಸ್ಕ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದೆ. ಈ ಬಗ್ಗೆ ಸ್ವತಃ ಝೈರಾ ತನಗೆ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಇನ್ ಸ್ಟಾಗ್ರಾಮ್ ವಿಡಿಯೋದಲ್ಲಿ ಆರೋಪಿಸಿದ್ದಾರೆ.

ದಿಲ್ಲಿಯಿಂದ ಮುಂಬೈಗೆ ತೆರಳುತ್ತಿದ್ದ ವಿಮಾನದಲ್ಲಿ ಝೈರಾ ಪ್ರಯಾಣಿಸುತ್ತಿದ್ದು, ಅವರ ಹಿಂದಿನ ಸೀಟ್ ನಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಝೈರಾ ಆರೋಪಿಸಿದ್ದಾರೆ.

ಝೈರಾ ವೀಡಿಯೋ ನೋಡಿದ ಬಳಿಕ  ಎಚ್ಚೆತ್ತುಕೊಂಡಿರುವ  ಏರ್‌ ವಿಸ್ತಾರಾ ವಿಮಾನಯಾನ ಸಂಸ್ಥೆ ಘಟನೆಯ ಬಗ್ಗೆ ಪರಿಶೀಲಿಸುವುದಾಗಿ ಭರವಸೆ ನೀಡಿದೆ ಎಂದು ತಿಳಿದು ಬಂದಿದೆ.

ಆರೋಪಿಯ ವಿರುದ್ಧ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಹಿಳಾ ಆಯೋಗವು ಏರ್‌ ವಿಸ್ತಾರಾ ವಿಮಾನಯಾನ ಸಂಸ್ಥೆಗೆ ನೋಟಿಸ್ ನೀಡಲು ನಿರ್ಧರಿಸಿದೆ ಎಂದು ಆಯೋಗದ ಸದಸ್ಯೆ ರೇಖಾ ಶರ್ಮಾ ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News