ಸಭಾಭವನ ಸಮಾಜದ ಸ್ವಾಭಿಮಾನ ಸಂಕೇತ: ಸಚಿವ ಪ್ರಮೋದ್

Update: 2017-12-10 13:28 GMT

ಉಡುಪಿ, ಡಿ.10: ಉಡುಪಿ ಗ್ರಾಮೀಣ ಬಂಟರ ಸಂಘದ ವತಿಯಿಂದ ಉಡುಪಿ ಕುಂತಳನಗರದಲ್ಲಿ ನಿರ್ಮಿಸಲಾಗುತ್ತಿರುವ ಉಡುಪಿ ಗ್ರಾಮೀಣ ಬಂಟರ ಸಂಘದ ಸಭಾಭವನದ ಶಿಲಾನ್ಯಾಸವನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಹಾಗೂ ಕಾಪು ಶಾಸಕ ವಿನಯ ಕುಮಾರ್ ಸೊರಕೆ ನೆರವೇರಿಸಿದರು.

ಬಳಿಕ ಮಾತನಾಡಿದ ಸಚಿವ ಪ್ರಮೋದ್ ಮಧ್ವರಾಜ್, ಸಭಾಭವನವು ಆಯಾ ಸಮಾಜದ ಸ್ವಾಭಿಮಾನ ಹಾಗೂ ಶಕ್ತಿಯ ಸಂಕೇತವಾಗಿದೆ. ಈ ಸಭಾ ಭವನ ನಿರ್ಮಾಣ ಕಾಮಗಾರಿಗೆ ರಾಜ್ಯ ಸರಕಾರ ಈಗಾಗಲೇ ಒಂದು ಕೋಟಿ ರೂ. ಮಂಜೂರು ಮಾಡಿದ್ದು, ಅದರ ಸರಕಾರಿ ಆದೇಶಕ್ಕೆ ಬೇಕಾದ ಎಲ್ಲ ರೀತಿಯ ಸಹಕಾರವನ್ನು ನೀಡಲಾಗುವುದು ಎಂದು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಮಾಲಾಡಿ ಅಜಿತ್ ಕುಮಾರ್ ರೈ, ಬೆಂಗಳೂರು ಎಂಆರ್‌ಜಿ ಗ್ರೂಪ್‌ನ ಚೇಯರ್‌ಮೆನ್ ಪ್ರಕಾಶ್ ಶೆಟ್ಟಿ, ಕಾಪು ಬಂಟರ ಸಂಘದ ಅಧ್ಯಕ್ಷ ವಾಸುದೇವ ಶೆಟ್ಟಿ, ಉಡುಪಿ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಉದ್ಯಮಿಗಳಾದ ಮನೋಹರ್ ಶೆಟ್ಟಿ, ಕೃಷ್ಣ ಶೆಟ್ಟಿ, ಹೆಬ್ರಿ- ಅಜೆಕಾರು ವಲಯ ಬಂಟರ ಸಂಘದ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಶೆಟ್ಟಿ, ಮುಖಂಡರಾದ ಉದಯ ಕುಮಾರ್ ಶೆಟ್ಟಿ, ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಸುರೇಶ್ ಶೆಟ್ಟಿ ಗುರ್ಮೆ, ನಾಗೇಶ್ ಹೆಗ್ಡೆ, ಬೆಳ್ಳಂಪಾಡಿ ಹರಿಪ್ರಸಾದ್ ರೈ, ನಾಗೇಶ್ ಹೆಗ್ಡೆ, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್‌ಚಂದ್ರ ಶೆಟ್ಟಿ, ಪ್ರಸಾದ್ ಕುಮಾರ್ ಶೆಟ್ಟಿ, ಧೀರಜ್ ಶೆಟ್ಟಿ, ಸುರೇಶ್ ಶೆಟ್ಟಿ, ಜಯರಾಜ್ ಹೆಗ್ಡೆ, ಕೊಲ್ಯಬೆಟ್ಟು ರವೀಂದ್ರ ಶೆಟ್ಟಿ, ಡಾ. ಪ್ರಶಾಂತ್ ಶೆಟ್ಟಿ, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ, ಸುಪ್ರಸಾದ್ ಶೆಟ್ಟಿ, ಕುದಿ ವಸಂತ ಶೆಟ್ಟಿ, ಗ್ರಾಮೀಣ ಬಂಟರ ಸಂಘದ ಅಧ್ಯಕ್ಷ ಸಕರಾಮ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಸಂಘದ ಚೆಯರ್‌ಮೆನ್ ಅಶೋಕ್ ಕುಮಾರ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತ ನಾಡಿದರು. ಹರೀಶ್ ಶೆಟ್ಟಿ ಪಡುಬೆಳ್ಳೆ ಸ್ವಾಗತಿಸಿದರು. ಕಾರ್ಯದರ್ಶಿ ಪದ್ಮನಾಭ ಹೆಗ್ಡೆ ವಂದಿಸಿದರು. ಡಾ.ಸುಧೀರ್ ರಾಜ್ ಕೆ. ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News