ಕೈಕಾಡು ಗ್ರಾಮದಲ್ಲಿ ಚಿರತೆ ಹೆಜ್ಜೆ ಗುರುತು ಪತ್ತೆ: ಗ್ರಾಮಸ್ಥರಲ್ಲಿ ಆತಂಕ
Update: 2017-12-10 22:34 IST
ಮಡಿಕೇರಿ, ಡಿ.10: ನಾಪೋಕ್ಲು ಸಮೀಪದ ಕೈಕಾಡು ಗ್ರಾಮದಲ್ಲಿ ಕಳೆದೆರಡು ದಿನಗಳ ಹಿಂದೆ ಬಾದುಮಂಡ ಗಣಪತಿ ಅವರಿಗೆ ಸೇರಿದ ಗದ್ದೆಯಲ್ಲಿ ಚಿರತೆ ಹೆಜ್ಜೆ ಗುರುತು ಪತ್ತೆಯಾಗಿದ್ದು, ಸ್ಥಳಿಯರನ್ನು ಆತಂಕಕ್ಕೀಡುಮಾಡಿದೆ.
ಗದ್ದೆಯಲ್ಲಿ ಮೇಯಲು ಕಟ್ಟಿದ್ದ ಜಾನುವಾರುಗಳು ಹಗ್ಗ ತುಂಡರಿಸಿ ಓಡಿ ಹೋಗಿರುವುದು ಗೋಚರಿಸಿದೆ. ಕಾರಣವನ್ನು ತಿಳಿಯಲು ಪರಿಶೀಲಿಸಿದಾಗ ಚಿರತೆಯ ಹೆಜ್ಜೆ ಗುರುತುಗಳು ಕಂಡು ಬಂದಿದೆ.
ಇದರಿಂದಾಗಿ ಗ್ರಾಮಸ್ಥರು ಭಯಭೀತರಾಗಿದ್ದು, ವನ್ಯಜೀವಿ ಉಪಟಳವನ್ನು ನಿಯಂತ್ರಿಸಲು ಅರಣ್ಯ ಇಲಾಖೆ ಸೂಕ್ತ ಕ್ರಮಕೈಗೊಳ್ಳಲು ಶೀಘ್ರ ಕಾರ್ಯೋಮುಖರಾಗಬೇಕೆಂದು ಒತ್ತಾಯಿಸಿದ್ದಾರೆ.