ಚೀನಾದ ವಿದೇಶಾಂಗ ಸಚಿವರ ಜೊತೆ ಸುಷ್ಮಾ ಸ್ವರಾಜ್ ಮಾತುಕತೆ

Update: 2017-12-11 12:48 GMT

ಹೊಸದಿಲ್ಲಿ,ಡಿ.11: ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರು ಸೋಮವಾರ ಇಲ್ಲಿ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರೊಂದಿಗೆ ಪ್ರಮುಖ ದ್ವಿಪಕ್ಷೀಯ ವಿಷಯಗಳ ಕುರಿತು ಮಾತುಕತೆಗಳನ್ನು ನಡೆಸಿದರು.

ಪರಸ್ಪರ ಆಸಕ್ತಿಯ ಎಲ್ಲ ವಿಷಯಗಳನ್ನು ಉಭಯ ನಾಯಕರು ಚರ್ಚಿಸಿದರು ಎಂದು ಮೂಲಗಳು ತಿಳಿಸಿವೆ.

ರಷ್ಯಾ-ಭಾರತ-ಚೀನಾ ತ್ರಿಪಕ್ಷೀಯ ಸಭೆಯಲ್ಲಿ ಪಾಲ್ಗೊಳ್ಳಲು ಭಾರತಕ್ಕೆ ಆಗಮಿಸಿರುವ ಯಿ ಅವರು ಸಂಜೆ ನಡೆದ ಭಾರತ-ಚೀನಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿಯೂ ಪಾಲ್ಗೊಂಡಿದ್ದರು.

 ಸಭೆಯಲ್ಲಿ ಮೂರೂ ದೇಶಗಳ ವಿದೇಶಾಂಗ ಸಚಿವರು ಭಯೋತ್ಪಾದನೆ ಸೇರಿದಂತೆ ಹಲವಾರು ಜ್ವಲಂತ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳನ್ನು ಚರ್ಚಿಸಲಿದ್ದಾರೆ.

ಕಳೆದ ಬೇಸಿಗೆಯಲ್ಲಿ ಸಿಕ್ಕಿಂ ವಿಭಾಗದಲ್ಲಿ ಸೃಷ್ಟಿಯಾಗಿದ್ದ ಡೋಕಾ ಲಾ ಬಿಕ್ಕಟ್ಟಿನ ಬಳಿಕ ಇದೇ ಮೊದಲ ಬಾರಿಗೆ ಚೀನಾದ ಉನ್ನತ ಪ್ರತಿನಿಧಿ ಭಾರತಕ್ಕೆ ಭೇಟಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News