ಕಾರು ಢಿಕ್ಕಿ : ಬೈಕ್ ಸವಾರ ಸಾವು, ಹಿಂಬದಿ ಸವಾರನಿಗೆ ಗಾಯ

Update: 2017-12-11 13:37 GMT

ಶಿವಮೊಗ್ಗ, ಡಿ. 11: ಓಮ್ನಿ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ. 

ಆದಿತ್ಯ (22) ಮೃತಪಟ್ಟ ಬೈಕ್ ಸವಾರ ಎಂದು ಗುರುತಿಸಲಾಗಿದೆ. ಹಿಂಬದಿ ಕುಳಿತ್ತಿದ್ದ ಸಂಜಯ್ (21) ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News