ಚಿಕ್ಕಮಗಳೂರು : ಅತ್ಯಾಚಾರ ಆರೋಪಿಗೆ ಶಿಕ್ಷೆ

Update: 2017-12-11 13:57 GMT

ಚಿಕ್ಕಮಗಳೂರು, ಡಿ.11: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಚಿಕ್ಕಮಗಳೂರು 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 10 ವರ್ಷಗಳ ಶಿಕ್ಷೆ ಸಹಿತ 80 ಸಾವಿರ ರೂ.ಗಳ ದಂಡ ವಿಧಿಸಿ ತೀರ್ಪು ನೀಡಿದೆ.

ಮೂಡಿಗೆರೆ ತಾಲ್ಲೂಕಿನ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂದೇಶ್ ಎಂಬ ವ್ಯಕ್ತಿ 2015ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ. ಈ ಆರೋಪಿಯು ಅಪ್ರಾಪ್ತ ಬಾಲಕಿಯ ಸ್ವಂತ ಭಾವನಾಗಿದ್ದ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದ ಬಣಕಲ್ ಪೊಲೀಸರು ಆರೋಫ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಚಿಕ್ಕಮಗಳೂರು 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾದೀಶ ನ್ಯಾಯಾಧೀಶ ಡಿ. ಕಂಬೇಗೌಡ ಆರೋಪಿಯ ಮೇಲೆ ಆರೋಪ ಸಾಬಿತಾಗಿದೆ ಎಂದು ಪರಿಗಣಿಸಿ ಆರೋಪಿ ಸಂದೇಶ್‍ನಿಗೆ 10 ವರ್ಷ ಕಠಿಣ ಸಜೆ 80 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News