ಅಧಿಕಾರಿಗಳಿಂದ ಪ್ರತಿ ಮಂಗಳವಾರ ‘ಜನಸ್ಪಂದನ’: ಸರಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ

Update: 2017-12-12 14:04 GMT

ಬೆಂಗಳೂರು, ಡಿ. 12: ಸಾಮಾನ್ಯ ಜನರ ಸಮಸ್ಯೆಗಳನ್ನು ಆಲಿಸಲು ಗ್ರಾಮ ಲೆಕ್ಕಿಗರಿಂದ ಹಿಡಿದು ಮುಖ್ಯ ಕಾರ್ಯದರ್ಶಿವರೆಗೂ ಎಲ್ಲ ಅಧಿಕಾರಿಗಳು ಪ್ರತಿ ಮಂಗಳವಾರ ‘ಜನಸ್ಪಂದನ’ ಕಾರ್ಯಕ್ರಮ ನಡೆಸಲಿದ್ದಾರೆ ಎಂದು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ತಿಳಿಸಿದ್ದಾರೆ.

ಮಂಗಳವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆದೇಶದ ವೆುೀಲೆಗೆ ಜನಸ್ಪಂದನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ ಎಂದರು.

ಪ್ರತಿ ಮಂಗಳವಾರ ಗ್ರಾಮ ಲೆಕ್ಕಿಗರು, ತಹಶೀಲ್ದಾರರು, ಜಿಲ್ಲಾಧಿಕಾರಿಗಳು, ಸರಕಾರದ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸೇರಿ ಎಲ್ಲ ಅಧಿಕಾರಿಗಳು ತಪ್ಪದೇ ಜನಸ್ಪಂದನ ನಡೆಸಬೇಕು ಎಂದು ಅವರು ನಿರ್ದೇಶನ ನೀಡಿದರು. ಮಂಗಳವಾರದಂದು ಅಧಿಕಾರಿಗಳು ಯಾವುದೇ ಕಾರಣಕ್ಕೂ ಬೇರೆ ಕಾರ್ಯಕ್ರಮ ಹಮ್ಮಿಕೊಳ್ಳುವಂತಿಲ್ಲ. ಪ್ರತಿ ಮಂಗಳವಾರದಂದು ಸಾರ್ವಜನಿಕರು ತಮ್ಮ ಸಮಸ್ಯೆ, ಅಹವಾಲುಗಳನ್ನು ಅಧಿಕಾರಿಗಳಿಗೆ ಸಲ್ಲಿಸಬಹುದು ಎಂದು ರತ್ನಪ್ರಭಾ ಇದೇ ವೇಳೆ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News