ಉಡುಪಿಯಲ್ಲಿ ತಂಬಾಕು ಮಾರಾಟ ಪ್ರಕರಣ: ದಂಡ ವಸೂಲಿ

Update: 2017-12-12 15:13 GMT

ಉಡುಪಿ, ಡಿ.12: ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಗಳ ಆದೇಶದಂತೆ ಜಿಲ್ಲಾ ತಂಬಾಕು ನಿಯಂತ್ರಣ ಘಟಕ, ಉಡುಪಿ ತಾಲೂಕಿನ ನಗರ ವ್ಯಾಪ್ತಿಯಲ್ಲಿ ಕೋಟ್ಪಾ-2003 ಕಾಯ್ದೆಯನ್ವಯ ದಾಳಿ ನಡೆಸಿ ಒಟ್ಟು 18 ಪ್ರಕರಣಗಳಲ್ಲಿ 3,400ರೂ. ದಂಡ ವಸೂಲಿ ಮಾಡಲಾಗಿದೆ. ಒಟ್ಟಾರೆ ಯಾಗಿ 20 ಪ್ರಕರಣಗಳಲ್ಲಿ 3,900 ರೂ. ದಂಡ ವಸೂಲಿ ಮಾಡಲಾಗಿದೆ.

ದಾಳಿಯಲ್ಲಿ ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ವಾಸುದೇವ, ರಾಜ್ಯ ತಂಬಾಕು ನಿಯಂತ್ರಣ ಘಟಕದ ವಿಭಾಗೀಯ ಸಂಯೋಜಕ ಮಹಾಂತೇಶ್ ಬಿ.ಯು, ತಾಲೂಕು ಆರೋಗ್ಯಾಧಿಕಾರಿ ಡಾ.ನಾಗರತ್ನ, ಜಿಲ್ಲಾ ಆರೋಗ್ಯ ಮೇಲ್ವಿಚಾರಕ ಕೆ. ಕೃಷ್ಣಪ್ಪ ಸೇರಿದಂತೆ ಅನೇಕ ಅಧಿಕಾರಿಗಳು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News