ಸಂಸದ ನಳಿನ್‌ಕುಮಾರ್ ಕಟೀಲ್ ಅರ್ಜಿ ವಿಚಾರಣೆ ಡಿ.13ಕ್ಕೆ ಮುಂದೂಡಿದ ಹೈಕೋರ್ಟ್

Update: 2017-12-12 16:59 GMT

ಹೈಕೋರ್ಟ್ ಬೆಂಗಳೂರು, ಡಿ.12: ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಾಖಲಾಗಿದ್ದ ಎಫ್‌ಐಆರ್ ರದ್ದು ಕೋರಿ ಸಂಸದ ನಳಿನ್‌ಕುಮಾರ್ ಕಟೀಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಡಿ.13ಕ್ಕೆ ಮುಂದೂಡಿದೆ. ಈ ಸಂಬಂಧ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎನ್.ಪಣೀಂದ್ರ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿತು.

ಮಂಗಳೂರು ಚಲೋ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರಲ್ಲಿ ಕೆಲವರನ್ನು ಬಂಧಿಸಿ ಕದ್ರಿಯ ಗೋರಕ್ಷನಾಥ ಸಭಾಂಗಣಕ್ಕೆ ಕರೆತಂದು ನಿಯಮಾವಳಿಯಂತೆ ಸಹಿ ತೆಗೆದುಕೊಳ್ಳಲಾಗುತ್ತಿತ್ತು. ಈ ವೇಳೆ ಸಭಾಂಗಣಕ್ಕೆ ಆಗಮಿಸಿದ ಸಂಸದ ನಳಿನ್ ಕುಮಾರ್ ಕದ್ರಿ ಇನ್ಸ್‌ಪೆಕ್ಟರ್ ಮಾರುತಿ ನಾಯ್ಕ್ ಜೊತೆ ಒರಟಾಗಿ ವರ್ತಿಸಿದ್ದಾರೆ ಎನ್ನಲಾಗಿತ್ತು.

ಕಾರ್ಯಕರ್ತರನ್ನು ತಕ್ಷಣ ಬಿಡುಗಡೆ ಮಾಡದಿದ್ದರೆ ಜಿಲ್ಲಾ ಬಂದ್‌ಗೆ ಕರೆ ನೀಡುವುದಾಗಿ ಬೆದರಿಕೆ ಹಾಕಿದ್ದ ಕಾರಣ ಪೊಲೀಸರು ನಳಿನ್ ಮತ್ತಿತರರ ಮೇಲೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News