ಚೊಚ್ಚಲ ಏಕದಿನ ಪಂದ್ಯವನ್ನಾಡಿದ ಸುಂದರ್

Update: 2017-12-13 08:35 GMT

 ಮೊಹಾಲಿ, ಡಿ.13: ತಮಿಳುನಾಡಿನ ಆಲ್‌ರೌಂಡರ್ ವಾಶಿಂಗ್ಟನ್ ಸುಂದರ್‌ಗೆ ಬುಧವಾರ ಶ್ರೀಲಂಕಾ ವಿರುದ್ಧದ ಎರಡನೇ ಏಕದಿನ ಪಂದ್ಯ ಆರಂಭಕ್ಕೆ ಮೊದಲು ಕೋಚ್ ರವಿ ಶಾಸ್ತ್ರಿ ಭಾರತದ ಕ್ಯಾಪ್‌ನ್ನು ಹಸ್ತಾಂತರಿಸಿದರು.

 18ರ ಹರೆಯದ ಸುಂದರ್ ಸ್ಪಿನ್ ಬೌಲಿಂಗ್ ಮಾಡುತ್ತಾರೆ. ಬ್ಯಾಟಿಂಗ್ ಕೌಶಲ್ಯವನ್ನು ಹೊಂದಿದ್ದಾರೆ. ಮುಂಬರುವ ಶ್ರೀಲಂಕಾ ವಿರುದ್ಧದ ಟ್ವೆಂಟಿ-20 ಸರಣಿಗೆ ಆಯ್ಕೆಯಾಗಿರುವ ಸುಂದರ್ ಅವರು ಕೊನೆಯ ಕ್ಷಣದಲ್ಲಿ ಕೇದಾರ್ ಜಾಧವ್ ಬದಲಿಗೆ ಏಕದಿನ ತಂಡಕ್ಕೆ ಆಯ್ಕೆಯಾಗಿದ್ದರು.

ಈ ವರ್ಷದ ಐಪಿಎಲ್‌ನ ಮೂಲಕ ಸುಂದರ್ ಪ್ರತಿಭೆ ಬೆಳಕಿಗೆ ಬಂದಿದ್ದರು. ಸ್ಟೀವನ್ ಸ್ಮಿತ್ ನಾಯಕತ್ವದ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ತಂಡ ಫೈನಲ್‌ಗೆ ತಲುಪಲು ಸುಂದರ್ ಪ್ರಮುಖ ಪಾತ್ರವಹಿಸಿದ್ದರು. ತಮಿಳುನಾಡು ಪ್ರೀಮಿಯರ್ ಲೀಗ್‌ನಲ್ಲಿ ಗರಿಷ್ಠ ಸ್ಕೋರರ್ ಹಾಗೂ ಗರಿಷ್ಠ ವಿಕೆಟ್ ಪಡೆದ ಸಾಧನೆ ಮಾಡಿದ್ದರು.

ರಣಜಿ ಟ್ರೋಫಿಯಲ್ಲಿ 12 ಪಂದ್ಯಗಳನ್ನು ಆಡಿರುವ ಸುಂದರ್ 532 ರನ್ ಗಳಿಸಿದ್ದಾರೆ. 12 ಪ್ರಥಮ ದರ್ಜೆ ಪಂದ್ಯಗಳಲ್ಲಿ 1 ಶತಕ ಹಾಗೂ 2 ಅರ್ಧಶತಕಗಳನ್ನು ಬಾರಿಸಿದ್ದಾರೆ. 12 ಪಂದ್ಯಗಳಲ್ಲಿ 30 ವಿಕೆಟ್‌ಗಳನ್ನು ಕಬಳಿಸಿದ್ದಾರೆ. 2 ಬಾರಿ ಐದು ವಿಕೆಟ್ ಹಾಗೂ 1 ಬಾರಿ 10 ವಿಕೆಟ್ ಗೊಂಚಲು ಪಡೆದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News