ಆಧಾರ್ ಕಡ್ಡಾಯ: ತಡೆಯಾಜ್ಞೆ ಕೋರಿ ಸಲ್ಲಿಸಿದ ಮನವಿ ವಿಚಾರಣೆ
Update: 2017-12-13 18:30 IST
ಹೊಸದಿಲ್ಲಿ, ಡಿ. 13: ಸರಕಾರದ ವಿವಿಧ ಯೋಜನೆಗಳು ಹಾಗೂ ಕಲ್ಯಾಣ ಕಾರ್ಯಕ್ರಮಗಳಿಗೆ ಆಧಾರ್ ಜೋಡಣೆ ಕಡ್ಡಾಯಗೊಳಿಸಿದ ಕೇಂದ್ರ ಸರಕಾರದ ನಿರ್ಧಾರಕ್ಕೆ ಮಧ್ಯಂತರ ತಡೆ ಕೋರಿ ಸಲ್ಲಿಸಲಾದ ಮನವಿಯ ಆಲಿಕೆಯನ್ನು ಐವರು ಸದಸ್ಯರ ಪೀಠ ಗುರುವಾರ ನಡೆಸಲಿದೆ ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ.
ವಿವಿಧ ಯೋಜನೆಗಳಿಗೆ ಆಧಾರ್ ಜೋಡಣೆ ಕಡ್ಡಾಯಗೊಳಿಸಿದ ಕೇಂದ್ರದ ಸರಕಾರದ ನಿರ್ಧಾರಕ್ಕೆ ಮಧ್ಯಂತರ ಪರಿಹಾರ ಕೋರಿ ಸಲ್ಲಿಸಲಾದ ಸಂವಾದಾತ್ಮಕ ಅರ್ಜಿಯನ್ನು ವಿಶಾಲ ಪೀಠ ಗುರುವಾರ 2 ಗಂಟೆಗೆ ವಿಚಾರಣೆ ನಡೆಸಲಿದೆ ಎಂದು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾಯಮೂರ್ತಿಗಳಾದ ಎ.ಎಂ. ಖನ್ವಿಲ್ಕರ್ ಹಾಗೂ ಡಿ.ವೈ. ಚಂದ್ರಚೂಡ ಅವರನ್ನೊಳಗೊಂಡ ಪೀಠ ಹೇಳಿದೆ.