ಪರೇಶ್ ಮೇಸ್ತ ನಿಗೂಢ ಸಾವು ಖಂಡಿಸಿ ಧರಣಿ

Update: 2017-12-13 14:31 GMT

ಮಂಗಳೂರು, ಡಿ.13: ಹೊನ್ನಾವರದ ಪರೇಶ್ ಮೇಸ್ತ ನಿಗೂಢ ಸಾವು ಖಂಡಿಸಿ ವಿಎಚ್‌ಪಿ ಮತ್ತು ಬಜರಂಗ ದಳದ ಕಾರ್ಯಕರ್ತರು ಬುಧವಾರ ದ.ಕ.ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸಿದರು.

ರಾಜ್ಯ ಸರಕಾರವು ಹಿಂದೂಗಳನ್ನು ಮಟ್ಟ ಹಾಕಲು ಷಡ್ಯಂತ್ರ ರೂಪಿಸುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮೊಗಲ್ ದೊರೆ ಮಾದರಿಯ ಆಡಳಿತ ನಡೆಸುತ್ತಿದ್ದಾರೆ. ಕಳೆದ ನಾಲ್ಕುವರೆ ವರ್ಷದಲ್ಲಿ ಹಿಂದುಗಳ ಸರಣಿ ಹತ್ಯೆ ನಡೆಯುತ್ತಿದ್ದರೂ ಸರಕಾರ ಏನೂ ಆಗಿಲ್ಲ ಎಂಬಂತೆ ಸುಮ್ಮನಿದೆ. ಪರೇಶ್ ಮೇಸ್ತ ಸಾವಿನ ಪ್ರಕರಣವನ್ನು ಸಿಐಡಿ ಅಥವಾ ಎನ್‌ಐಎ ಸಂಸ್ಥೆಗೆ ವಹಿಸಿಕೊಡಬೇಕು ಹಾಗೂ ಮತ್ತೊಮ್ಮೆ ಮರಣೋತ್ತರ ಪರೀಕ್ಷೆ ನಡೆಸಬೇಕು ಎಂದು ಧರಣಿ ನಿರತರು ಆಗ್ರಹಿಸಿದರು.

ಧರಣಿಯಲ್ಲಿ ಸಂಘಟನೆಗಳ ಮುಖಂಡರಾದ ಶರಣ್ ಪಂಪ್‌ವೆಲ್, ಜಗದೀಶ್ ಶೇಣವ, ಗೋಪಾಲ್ ಕುತ್ತಾರ್, ವಾಸುದೇವ ಗೌಡ, ಶಿವಾನಂದ ಮೆಂಡನ್ ಮತ್ತಿತರರು ಪಾಲ್ಗೊಂಡಿದ್ದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News