ವಾಯು ಸೇನೆಗೆ ಅರ್ಜಿ ಆಹ್ವಾನ

Update: 2017-12-13 16:39 GMT

ಉಡುಪಿ, ಡಿ.13: ಭಾರತೀಯ ವಾಯು ಸೇನೆಗೆ ಸೇರಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಅವಿವಾಹಿತ ಅರ್ಹ ಪುರುಷ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಮತ್ತು ತರಬೇತಿಯನ್ನು ನೀಡಲು ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1,2ಎ,3ಎ ಹಾಗೂ 3ಬಿಗಳಿಗೆ ಸೇರಿದ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವವರು ಡಿ.15ರೊಳಗೆ ಆನ್‌ಲೈನ್ ಮೂಲಕ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗಾಗಿ ಇಲಾಖೆ -www.backwardclasses.kar.nic.in - ವೆಬ್‌ಸೈಟ್‌ನ್ನು ನೋಡಬಹುದು. ಅಥವಾ ದೂರವಾಣಿ: 080-65970004 ಹಾಗೂ 0820-2573881ನ್ನು ಸಂಪರ್ಕಿಸಬಹುದು.

ತರಬೇತಿಯ ವೇಳೆ ಅಭ್ಯರ್ಥಿಗಳಿಗೆ ಉಚಿತ ಊಟ ಮತ್ತು ವಸತಿ ಸೌಲಭ್ಯ ಗಳನ್ನು ನೀಡಲಾಗುತ್ತದೆ ಎಂದು ಉಡುಪಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News