×
Ad

‘ನೃಪತುಂಗ ಸಾಹಿತ್ಯ ಪ್ರಶಸ್ತಿ’ಗೆ ಎಸ್.ಎಲ್.ಭೈರಪ್ಪ ಆಯ್ಕೆ

Update: 2017-12-14 20:51 IST

ಬೆಂಗಳೂರು, ಡಿ. 14: ಬೆಂಗಳೂರು ಮಹಾ ನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ) ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸ್ಥಾಪಿಸಿರುವ ಪ್ರತಿಷ್ಠಿತ ‘ನೃಪತುಂಗ ಸಾಹಿತ್ಯ ಪ್ರಶಸ್ತಿ’ಗೆ ಖ್ಯಾತ ಕಾದಂಬರಿಕಾರ ಡಾ.ಎಸ್.ಎಲ್.ಭೈರಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯು 7ಲಕ್ಷದ 1 ರೂಪಾಯಿ ನಗದು, ಪ್ರಶಸ್ತಿ ಫಲಕ, ಸ್ಮರಣಿಕೆ ಒಳಗೊಂಡಿದೆ. ಹಿರಿಯ ಕವಿ ಬಿ.ಆರ್.ಲಕ್ಷ್ಮಣರಾವ್, ವಿದ್ವಾಂಸ ಡಾ.ವೀರಣ್ಣ ರಾಜೂರ, ಬಿಎಂಟಿಸಿ ಭದ್ರತೆ ಮತ್ತು ಜಾಗೃತಿ ನಿರ್ದೇಶಕ ಎ.ಎನ್.ಪ್ರಕಾಶಗೌಡ, ಕಾರ್ಮಿಕ ಕಲ್ಯಾಣಾಧಿಕಾರಿ ವಿಜಯಕುಮಾರ್ ರೈ, ಕೇಂದ್ರ ಕನ್ನಡ ಕ್ರಿಯಾ ಸಮಿತಿ ಅಧ್ಯಕ್ಷ ವ.ಚ.ಚನ್ನೇಗೌಡ ಒಳಗೊಂಡ ಆಯ್ಕೆ ಸಮಿತಿ ಈ ಪ್ರಶಸ್ತಿಗೆ ಭೈರಪ್ಪರನ್ನು ಆಯ್ಕೆ ಮಾಡಿದೆ ಎಂದು ತಿಳಿಸಲಾಗಿದೆ.

ಮಯೂರ ವರ್ಮ ಸಾಹಿತ್ಯ ಪ್ರಶಸ್ತಿ: ನಲವತ್ತೈದು ವರ್ಷದೊಳಗಿನ ಸಾಹಿತಿಗಳಿಗೆ ನೀಡುವ ‘ಮಯೂರವರ್ಮ ಸಾಹಿತ್ಯ ಪ್ರಶಸ್ತಿಗೆ ರಾಮಲಿಂಗೇಶ್ವರ (ಸಿಸಿರಾ), ಡಾ.ಸಿ.ನಂದಿನಿ, ಶಾಂತಿ ಕೆ.ಅಪ್ಪಣ್ಣ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯು ತಲಾ 25 ಸಾವಿರ ರೂ.ನಗದು, ಫಲಕ, ಪ್ರಶಸ್ತಿಪತ್ರ ಒಳಗೊಂಡಿದೆ ಎಂದು ಕಸಾಪ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News