×
Ad

ಅಕ್ರಮ ಮರಳು ದಾಸ್ತಾನು ವಶ

Update: 2017-12-14 22:05 IST

ಶಿವಮೊಗ್ಗ, ಡಿ. 14: ಪರವಾನಿಗೆಯಿಲ್ಲದೆ ಭದ್ರಾ ನದಿಯಿಂದ ಮರಳು ತೆಗೆದು ಮಾರಾಟ ಮಾಡಲು ದಾಸ್ತಾನು ಮಾಡಿದ್ದರೆನ್ನಲಾದ ಲಕ್ಷಾಂತರ ರೂ. ಮೌಲ್ಯದ ಮರಳನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಕಾಟಿಕೆರೆ ಸಕ್ರೆಬೈಲು ಗ್ರಾಮದಲ್ಲಿ ವರದಿಯಾಗಿದೆ.
ಖಚಿತ ವರ್ತಮಾನದ ಮೇರೆಗೆ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಸುಮಾರು 1 ಲಕ್ಷ ರೂ. ಮೌಲ್ಯದ 20 ರಿಂದ 22 ಟ್ರ್ಯಾಕ್ಟರ್ ಲೋಡ್ ಮರಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News