ರಾಜಕೀಯ ನಿವೃತ್ತಿಗೆ ಮುಂದಾದ ಸೋನಿಯಾ ಗಾಂಧಿ

Update: 2017-12-15 08:13 GMT

ಹೊಸದಿಲ್ಲಿ, ಡಿ.15: ಪುತ್ರ ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷ ಸ್ಥಾನ ವಹಿಸಿಕೊಂಡ ತಕ್ಷಣ ರಾಜಕೀಯದಿಂದ ನಿವೃತ್ತಿಯಾಗುತ್ತೇನೆ ಎಂದು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಘೋಷಿಸಿದ್ದಾರೆ.

ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸಲು ಬಂದಿರುವ ಸೋನಿಯಾ ಗಾಂಧಿ ಸುದ್ದಿಗಾರರೊಂದಿಗೆ ಮಾತನಾಡಿ ಕಾಂಗ್ರೆಸ್ ಪಕ್ಷದಲ್ಲಿ ತನ್ನ ಭವಿಷ್ಯದ ಬಗ್ಗೆ ವೌನ ಮುರಿದಿದ್ದಾರೆ. ರಾಜಕೀಯ ನಿವೃತ್ತಿಯ ಬಗ್ಗೆ ಗಂಭೀರ ಚಿಂತನೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.

ಕಾಂಗ್ರೆಸ್ ಸೋಮವಾರ ರಾಹುಲ್ ಗಾಂಧಿಯವರನ್ನು ತನ್ನ ಅಧ್ಯಕ್ಷರನ್ನಾಗಿ ಘೋಷಿಸಿದ್ದು, 47ರ ಹರೆಯದ ರಾಹುಲ್ ಡಿ.16 ರಂದು ತನ್ನ ತಾಯಿ ಹಾಗೂ ಹಾಲಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಂದ ಅಧಿಕಾರ ಸ್ವೀಕರಿಸಲಿದ್ದಾರೆ. ಸೋನಿಯಾ ಕಳೆದ 19 ವರ್ಷಗಳಿಂದ ಎಐಸಿಸಿ ಅಧ್ಯಕ್ಷರಾಗಿ ಪಕ್ಷವನ್ನು ಮುನ್ನಡೆಸಿದ್ದಾರೆ.

ರಾಹುಲ್ 2013ರ ಜನವರಿಯಲ್ಲಿ ಪಕ್ಷದ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು.

‘‘ಇಡೀ ದೇಶ ರಾಹುಲ್ ಗಾಂಧಿ ಅವರಿಂದ ಭಾರೀ ನಿರೀಕ್ಷೆ ಇಟ್ಟುಕೊಂಡಿದೆ. ಅವರು ಅಧ್ಯಕ್ಷರಾಗಿ ಆಯ್ಕೆಯಾಗುವ ಮೊದಲು ತನ್ನ ಶಕ್ತಿ ತೋರಿಸಬೇಕಾಗಿದೆ. ಅವರಿಗೆ ತನ್ನ ಜವಾಬ್ದಾರಿಯ ಅರಿವಿದೆ’’ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News