×
Ad

ಎಸ್‌ಎಸ್‌ಸಿ ನೇಮಕಾತಿ ಪ್ರಕ್ರಿಯೆಯಲ್ಲಿ ಪ್ರಾದೇಶಿಕ ಭಾಷೆ ಕಡೆಗಣನೆ: ಪ್ರಧಾನಿಗೆ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಪತ್ರ

Update: 2017-12-15 18:42 IST

ಬೆಂಗಳೂರು, ಡಿ.15: ಕೇಂದ್ರ ಸರಕಾರದ ಸಿಬ್ಬಂದಿ ಆಯ್ಕೆ ಆಯೋಗ(ಸ್ಟಾಫ್ ಸೆಲೆಕ್ಷನ್ ಕಮಿಷನ್)ವು ಒಕ್ಕೂಟ ವ್ಯವಸ್ಥೆಯಲ್ಲಿ ಸಂವಿಧಾನದ ಆಶಯಗಳನ್ನು ಉಲ್ಲಂಘಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ಸಿಬ್ಬಂದಿ ಆಯ್ಕೆ ಆಯೋಗವು ಗುಮಾಸ್ತರು, ಸಹಾಯಕರು ಡಾಟಾ ಎಂಟ್ರಿ ಆಪರೇಟರ್‌ಗಳು ಸೇರಿದಂತೆ 3 ಸಾವಿರ ಹುದ್ದೆಗಳ ನೇಮಕಾತಿಗೆ ಘೋಷಣೆ ಮಾಡಿದೆ. ಆದರೆ, ನೇಮಕಾತಿ ಪ್ರಕ್ರಿಯೆಯಲ್ಲಿ ಪ್ರಾದೇಶಿಕತ ಪ್ರಾತಿನಿಧ್ಯವನ್ನು ಕಡೆಗಣಿಸಲಾಗುತ್ತಿದೆ ಎಂದು ಅವರು ದೂರಿದ್ದಾರೆ.

ಆದುದರಿಂದ, ಈಗ ಹೊರಡಿಸಲಾಗಿರುವ ನೇಮಕಾತಿ ಅಧಿಸೂಚನೆಯನ್ನು ಹಾಗೂ ಇತ್ತೀಚಿಗಿನ ನೇಮಕಾತಿಗಳನ್ನು ರದ್ದುಪಡಿಸಿ ಕರ್ನಾಟಕ ಹಾಗೂ ಕೇರಳ ಪ್ರಾಂತ್ಯದ ಉದ್ಯೋಗಾರ್ಥಿಗಳಿಗೆ ಮರುಪರೀಕ್ಷೆಯ ಸೌಲಭ್ಯವನ್ನು ಕಲ್ಪಿಸಬೇಕು ಎಂದು ಕೋರಿ ಪ್ರಧಾನಿ, ಆಡಳಿತ ಸುಧಾರಣಾ ಸಚಿವರು ಹಾಗೂ ಎಸ್‌ಎಸ್‌ಸಿ ಅಧ್ಯಕ್ಷರಿಗೆ ಪತ್ರದಲ್ಲಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News