ಪರೇಶ್ ಮೇಸ್ತಾ ಪ್ರಕರಣ ಖಂಡಿಸಿ ಬಿಜೆಪಿ ಧರಣಿ
ಉಡುಪಿ, ಡಿ.15: ಪರೇಶ್ ಮೇಸ್ತಾ ಸಾವಿನ ಪ್ರಕರಣವನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಶುಕ್ರವಾರ ಅಜ್ಜರಕಾಡು ಸೈನಿಕ ಹುತಾತ್ಮ ಸ್ಮಾರಕದ ಎದುರು ಧರಣಿ ನಡೆಸಲಾಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಮಾತನಾಡಿ, ಕಾಂಗ್ರೆಸ್ ಸರಕಾರದ ಹಿಂದೂ ವಿರೋಧಿ ನೀತಿ ಖಂಡನೀಯ. ಸರಕಾರ ಮೇಸ್ತಾ ಸಾವಿನ ತನಿಖೆಯ ದಿಕ್ಕನ್ನು ತಪ್ಪಿಸುತ್ತಿದೆ. ಪೊಲೀಸ್ ಇಲಾಖೆಯು ಸಮಾಜ ಘಾತುಕ ಶಕ್ತಿಗಳನ್ನು ಹತ್ತಿಕ್ಕುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ರಘುಪತಿ ಭಟ್, ಲಾಲಾಜಿ ಆರ್. ಮೆಂಡನ್, ಜಿಪಂ ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಬಿಜೆಪಿ ಮುಖಂಡರಾದ ಸುರೇಶ್ ನಾಯಕ್ ಕುಯಿಲಾಡಿ, ಯಶ್ಪಾಲ್ ಸುವರ್ಣ, ಶ್ರೀಶ ನಾಯಕ್, ಶ್ಯಾಮಲಾ ಕುಂದರ್, ಶಿಲ್ಪಾ ಸುವರ್ಣ, ರೇಶ್ಮಾ ಉದಯ ಶೆಟ್ಟಿ, ಕಟಪಾಡಿ ಶಂಕರ ಪೂಜಾರಿ, ಸುಪ್ರಸಾದ್ ಶೆಟ್ಟಿ, ಸುರೇಶ್ ಶೆಟ್ಟಿ ಗುರ್ಮೆ, ಪ್ರಭಾಕರ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.