ಡಿ.17ರಂದು ಡೈರಿ ಬಿಡುಗಡೆ, ಸನ್ಮಾನ, ಪ್ರತಿಭಾ ಪುರಸ್ಕಾರ
ಉಡುಪಿ, ಡಿ.15: ಕರ್ನಾಟಕ ರಾಜ್ಯ ಅರಣ್ಯ ರಕ್ಷಕರ ಮತ್ತು ವೀಕ್ಷಕರ ಸಂಘ ಕುಂದಾಪುರ ವಿಭಾಗ ಮತ್ತು ಕುದುರೆಮುಖ ವನ್ಯಜೀವಿ ವಿಭಾಗ ಕಾರ್ಕಳ ಇದರ ವತಿಯಿಂದ ಹೊಸ ವರ್ಷದ ಡೈರಿ ಬಿಡುಗಡೆ, ನಿವೃತ್ತರಿಗೆ ಸನ್ಮಾನ, ಅಭಿನಂದನೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಡಿ.17ರಂದು ಬೆಳಗ್ಗೆ 10:30ಕ್ಕೆ ಉಡುಪಿ ಕಿದಿಯೂರು ಹೊಟೇಲಿನ ಶೇಷಶಯನ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕಿಶನ್ ಸಿಂಗ್ ಸುಗಾರ ಉದ್ಘಾಟಿಸಲಿರುವರು. ಮುಖ್ಯ ಅತಿಥಿಗಳಾಗಿ ಮಂಗಳೂರು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಡಾ.ಸಂಜಯ್ ಬಿಜೂರು, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪ್ರಕಾಶ್ ಎಸ್.ನೆಟಾಲ್ಕರ್ ಮೊದಲಾದವರು ಭಾಗವಹಿಸಲಿರುವರು ಎಂದು ಸಂಘದ ಪ್ರಧಾನ ಕಾರ್ಯ ದರ್ಶಿ ಕೇಶವ ಪೂಜಾರಿ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಕ್ರೀಡಾಕೂಟದಲ್ಲಿ ವಿಶೇಷ ಸಾಧನೆಗೈದ ಅರಣ್ಯ ರಕ್ಷಕ, ವೀಕ್ಷಕರಿಗೆ ಸನ್ಮಾನ, ಅರಣ್ಯ ರಕ್ಷಕರ ಮತ್ತು ವೀಕ್ಷಕರ ಹಾಗೂ ದಿನಗೂಲಿ ಅರಣ್ಯ ವೀಕ್ಷಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ವಿಶೇಷ ಸಾಧನೆಗೈದ ಸಮಾಜ ಸೇವಕರಿಗೆ ಸನ್ಮಾನ ಮಾಡಲಾಗುವುದು ಎಂದು ಅವರು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಸಂಘದ ಗೌರವಾಧ್ಯಕ್ಷ ದೇವರಾಜ ಪಾಣ ಉಪಸ್ಥಿತರಿದ್ದರು.