ಜಿಲ್ಲಾ ವಕ್ಫ್ ಸಲಹಾ ಸಮಿತಿ ಸದಸ್ಯರಾಗಿ ಹನೀಫ್ ಕೆ.ಎಂ ನೇಮಕ
Update: 2017-12-15 23:12 IST
ಪುತ್ತೂರು, ಡಿ. 15: ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿ ಸದಸ್ಯರಾಗಿ ಕೆಯ್ಯೂರು ಗ್ರಾ.ಪಂ.ಸದಸ್ಯ ಹನೀಫ್ ಕೆ.ಎಂ. ಅವರು ನೇಮಕಗೊಂಡಿದ್ದಾರೆ.
ವಕ್ಫ್ ಸಚಿವ ತನ್ವೀರ್ ಸೇಠ್ ಮುಂದಾಳತ್ವದಲ್ಲಿ, ದ.ಕ.ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ. ಖಾದರ್ ಮತ್ತು ಶಾಸಕಿ ಶಕುಂತಳಾ ಶೆಟ್ಟಿ ಅವರ ಶಿಫಾರಸ್ಸಿನಂತೆ ಹನೀಫ್ ಕೆ.ಎಂ. ಅವರನ್ನು ನೇಮಕಗೊಳಿಸಲಾಗಿದೆ.
ಪ್ರಸ್ತುತ ಕೆಯ್ಯೂರು ಗ್ರಾ.ಪಂ. ಸದಸ್ಯರಾಗಿ, ಕೆಯ್ಯೂರು ಗ್ರಾಮೀಣ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯಾಗಿರುವ ಹನೀಫ್ ಕೆ.ಎಂ. ಅವರು ಕೆದಂಬಾಡಿ ಗ್ರಾ.ಪಂನ ಉಪಾಧ್ಯಕ್ಷ ರಾಗಿ, ಗೌಸಿಯಾ ಯಂಗ್‌ಮೆನ್ಸ್ ಅಸೋಸಿಯೇಶನ್ ಅಧ್ಯಕ್ಷರಾಗಿ, ಕೆಯ್ಯೂರು ಗ್ರಾಮೀಣ ಜಯಕರ್ನಾಟಕ ಸಂಘಟನೆಯ ಪ್ರಧಾನ ಕಾರ್ಯದರ್ಶಿಯಾಗಿ ಸೇರಿದಂತೆ ಹಲವಾರು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.