ಆಸ್ಟ್ರೇಲಿಯದ ಅಂಡರ್-19 ಕ್ರಿಕೆಟ್ ತಂಡಕ್ಕೆ ಭಾರತ ಮೂಲದ ಜೇಸನ್ ಸಂಘಾ ನಾಯಕ

Update: 2017-12-16 05:50 GMT

ಸಿಡ್ನಿ, ಡಿ.16: ಒಂದು ತಿಂಗಳ ಹಿಂದೆ ಕಿರಿಯ ವಯಸ್ಸಿನಲ್ಲಿ ಶತಕ ಸಿಡಿಸಿ ವಿಶ್ವದ ಗಮನ ಸೆಳೆದಿದ್ದ ಭಾರತ ಮೂಲದ ಆಟಗಾರ ಜೇಸನ್ ಸಂಘಾ ನ್ಯೂಝಿಲೆಂಡ್‌ನಲ್ಲಿ ಮುಂದಿನ ತಿಂಗಳು ನಡೆಯಲಿರುವ ಅಂಡರ್-19 ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯ ತಂಡವನ್ನು ನಾಯಕನಾಗಿ ಮುನ್ನಡೆಸಲಿದ್ದಾರೆ.

ವಿಶ್ವಕಪ್‌ನಲ್ಲಿ ಆಸೀಸ್ ತಂಡದ ನಾಯಕನಾಗಿ ಆಯ್ಕೆಯಾಗಿರುವ ಭಾರತ ಮೂಲದ ಮೊದಲ ಕ್ರಿಕೆಟಿಗನಾಗಿದ್ದಾರೆ. ಬಲಗೈ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಸಂಘಾ ತಿಂಗಳ ಹಿಂದೆ ಟೂರ್ ಪಂದ್ಯದಲ್ಲಿ ಕ್ರಿಕೆಟ್ ಆಸ್ಟ್ರೇಲಿಯವನ್ನು ಪ್ರತಿನಿಧಿಸಿ ಇಂಗ್ಲೆಂಡ್‌ನ ವಿರುದ್ಧ ಪಂದ್ಯದಲ್ಲಿ ಸ್ಟುವರ್ಟ್ ಬ್ರಾಡ್, ಕ್ರಿಸ್ ವೋಕ್ಸ್, ಕ್ರೆಗ್ ಎವರ್ಟನ್ ಹಾಗೂ ಮೊಯಿನ್ ಅಲಿ ದಾಳಿಯನ್ನು ದಿಟ್ಟವಾಗಿ ಎದುರಿಸಿ 226 ಎಸೆತಗಳಲ್ಲಿ 113 ರನ್ ಗಳಿಸಿದ್ದರು.

ಆಸ್ಟ್ರೇಲಿಯದ ಅಂಡರ್-19 ವಿಶ್ವಕಪ್‌ನಲ್ಲಿ ಮಾಜಿ ನಾಯಕ ಸ್ಟೀವ್ ವಾ ಅವರ ಹಿರಿಯ ಪುತ್ರ ಆಸ್ಟಿನ್ ವಾ ಸ್ಥಾನ ಪಡೆದಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News