×
Ad

ಇರಾ: ಮಹಿಳಾ ಹಾಗೂ ಮಕ್ಕಳ ಗ್ರಾಮಸಭೆ

Update: 2017-12-16 15:56 IST

ಬಂಟ್ವಾಳ, ಡಿ.16: ಇರಾ‌‌‌ ಗ್ರಾಮ ಪಂಚಾಯತ್ ವತಿಯಿಂದ ಮಹಿಳಾ ಹಾಗೂ ಮಕ್ಕಳ ಗ್ರಾಮಸಭೆಯು ಇಂದು ಗ್ರಾಮ‌ ಪಂಚಾಯತ್ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಮಹಿಳೆಯರು ಹಾಗೂ ಮಕ್ಕಳು ಪ್ರಸಕ್ತ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲಾಯಿತು. ಗ್ರಾಮ ಪಂಚಾಯತ್ ಸದಸ್ಯರು, ಶಾಲಾ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ಶಾಲಾ ಮಕ್ಕಳು, ಗ್ರಾಮಸ್ಥರ ಮಹಿಳೆಯರು ಪಾಲ್ಗೊಂಡಿದ್ದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಗುಣವತಿ ಹಾಗೂ ಸಾಂತ್ವನ ಕೇಂದ್ರದ ಪ್ರತಿನಿಧಿ ಪ್ರಶಾಂತ್ ಚೌಕದಪಾಲು, ಸಂಪನ್ಮೂಲ ವ್ಯಕ್ತಿಗಳಾಗಿ  ಮಾಹಿತಿ ನೀಡಿದರು. ಪಂಚಾಯತ್ ಪ್ರಭಾರ ಅಭಿವೃದ್ಧಿ ಅಧಿಕಾರಿ ನಳಿನಿ ಎ.ಕೆ. ಸ್ವಾಗತಿಸಿದರು. ಪಂಚಾಯತ್ ಸಿಬ್ಬಂದಿ ಗುಲಾಬಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News