ಬಂಟ್ವಾಳ: ಎಸ್‌ಡಿಪಿಐ ಕಾರ್ಯಕರ್ತರ ಸಭೆ

Update: 2017-12-16 10:30 GMT

ಬಂಟ್ವಾಳ, ಡಿ.16: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಭೆಯೂ ಬಿ.ಸಿ.ರೋಡಿನ ಅಲ್-ಖಝಾನ ಸಮುದಾಯ ಭವನದಲ್ಲಿ ಶುಕ್ರವಾರ ರಾತ್ರಿ ನಡೆಯಿತು
ಕ್ಷೇತ್ರ ಸಮಿತಿಯ ಅಧ್ಯಕ್ಷ ಶಾಹುಲ್ ಎಸ್.ಎಚ್. ಅಧ್ಯಕ್ಷೆ ವಹಿಸಿದ್ದರು. ಈ ಸಂದರ್ಭ ಪಕ್ಷದ ಆಂತರಿಕ ಚುಣಾವಣೆ ಮತ್ತು 2018ರಲ್ಲಿ ನಡೆಯುವ ವಿದಾನಸಭಾ ಚುಣಾವಣೆಗೆ ಪೂರ್ವ ಸಿದ್ಧತೆಯ ಬಗ್ಗೆ ಚರ್ಚಿಸಲಾಯಿತು.

ಡಿ. 22ರಂದು ಕ್ಷೇತ್ರದ ಎಲ್ಲ ಕಾರ್ಯಕರ್ತರ ಉಪಸ್ಥಿತಿಯಲ್ಲಿ ಸಭೆ ನಡೆಸಿ ಬಂಟ್ವಾಳ ಕ್ಷೇತ್ರದ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಬಗ್ಗೆ ಪಕ್ಷದ ರಾಷ್ಟ್ರ ನಾಯಕರ ಸಮ್ಮುಖದಲ್ಲಿ ಚರ್ಚಿಸಲಾಗುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.

ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಹನೀಫ್ ಕಾನ್ ಕೊಡಾಜೆ, ಜಿಲ್ಲಾ ಕೋಶಾಧಿಕಾರಿ ಇಕ್ಬಾಲ್ ಗೂಡಿನಬಳಿ, ಕ್ಷೇತ್ರ ಕಾರ್ಯದರ್ಶಿ ಇಸ್ಮಾಯಿಲ್ ಬಾವ ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News